Latest

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ

Published

on

Share this

ನವದೆಹಲಿ: ವಿಧಾನಸಭೆಯಿಂದ ಚಾಂದಿನಿ ಚೌಕದಲ್ಲಿರುವ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗವೊಂದು ದೆಹಲಿಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಈ ಸುರಂಗವನ್ನು ಬಳಸುತ್ತಿದ್ದರು ಎಂದು ಮಾಹಿತಿ ಹಂಚಿಕೊಂಡರು.ಇದನ್ನೂ ಓದಿ: ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್

ನಾನು 1993ರಲ್ಲಿ ಶಾಸಕನಾದಾಗ ಕೆಂಪುಕೋಟೆಯವರೆಗೆ ಹೋಗುವ ಸುರಂಗ ಮಾರ್ಗದ ಬಗ್ಗೆ ಕೇಳಿದ್ದೆ. ಅದಲ್ಲದೆ ನಾನು ಅದರ ಇತಿಹಾಸವನ್ನು ಹುಡುಕಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಈ ಬಗ್ಗೆ ಇನ್ನು ಕೂಡ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲವೆಂದು ಗೋಯೆಲ್ ತಿಳಿಸಿದ್ದಾರೆ.

ಪ್ರಸ್ತುತ ಈ ಸುರಂಗ ಮಾರ್ಗವನ್ನು ನಾವು ಪತ್ತೆ ಹಚ್ಚಿದ್ದೇವೆ. ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಕಾಮಗಾರಿಯ ಸಂದರ್ಭ ಈ ಸುರಂಗದ ಮಾರ್ಗಗಳು ನಾಶವಾಗಿದೆ. ಹಾಗಾಗಿ ನಾವು ಅದನ್ನು ಮತ್ತಷ್ಟು ಅಗೆಯಲು ಮುಂದಾಗಿಲ್ಲ. ಶೀಘ್ರದಲ್ಲೇ ನಾವು ಅದನ್ನು ನವೀಕರಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುತ್ತೇವೆ. ಮುಂದಿನ ವರ್ಷ ಆಗಸ್ಟ್ 15 ರೊಳಗೆ ನವೀಕರಣ ಕಾರ್ಯ ಮುಗಿಯುವ ನಿರೀಕ್ಷೆಯಿದೆ ಎಂದರು. ಇದನ್ನೂ ಓದಿ: ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

1912ರಲ್ಲಿ ಬ್ರಿಟಿಷರು ಕೋಲ್ಕತ್ತಾದಿಂದ ಕೇಂದ್ರ ಶಾಸಕಾಂಗ ಕಚೇರಿಯನ್ನು ದೆಹಲಿ ವಿಧಾನ ಸಭೆ ಕಟ್ಟಡಕ್ಕೆ ಸ್ಥಳಾಂತರಿಸಿದ್ದರು. ನಂತರ 1962ರಲ್ಲಿ ಈ ಕಟ್ಟಡವನ್ನು ಕೋರ್ಟ್ ಆಗಿ ಪರಿವರ್ತಿಸಲಾಗಿತ್ತು. ಅದಲ್ಲದೆ ಸ್ವಾತಂತ್ರ್ಯ ಹೋರಾಟಗಾರರನ್ನು ಕೋರ್ಟ್‍ಗೆ ಹಾಜರುಪಡಿಸಲು ಬ್ರಿಟಿಷರು ಈ ರಹಸ್ಯ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂಬ ಬಗ್ಗೆ ಮಾಹಿತಿ ಇದೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications