ಕರೆಂಟ್ ಶಾಕ್ – ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮೈಶುಗರ್ ಕಾರ್ಖಾನೆ

Public TV
1 Min Read
Mysugar Sugar Factory

ಮಂಡ್ಯ: ವಿದ್ಯುತ್ ದರ ಏರಿಕೆಯಾಗಿದ್ದು ರಾಜ್ಯಾದ್ಯಂತ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇತ್ತೀಚೆಗಷ್ಟೇ ಪುನರಾರಂಭಗೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ (Mysugar Sugar Factory) ಕೋಟಿ ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವುದು ಕಂಡುಬಂದಿದೆ.

ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾಗಿರುವ ಮೈಶುಗರ್ 2000 ಇಸವಿಯಿಂದಲೂ ಕರೆಂಟ್ ಬಿಲ್ (Electricity Bill) ಕಟ್ಟದೇ ಬರೋಬ್ಬರಿ 40 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ

Mysugar Sugar Factory 1

ರೋಗಗ್ರಸ್ಥ ಕಾರ್ಖಾನೆ ಎಂದೇ ಬಿಂಬಿಸಿಕೊಂಡಿದ್ದ ಕಾರ್ಖಾನೆಯ ಪುನರಾರಂಭಕ್ಕೆ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ 50 ಕೋಟಿ ಬಿಡುಗಡೆ ಮಾಡಿತ್ತು. ಸಂಸದೆ ಸುಮಲತಾ (Sumalatha Ambareesh) ಕಾರ್ಖಾನೆ ಪುನರಾರಂಭಕ್ಕೆ ಚಾಲನೆ ನೀಡಿದ್ದರು. ಕಾರ್ಯಾರಂಭಕ್ಕೆ ಸಿದ್ಧವಾಗಿರುವ ಕಾರ್ಖಾನೆ ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್ ಕಬ್ಬು ನುರಿಯುವ ಗುರಿ ಹೊಂದಿದೆ. ಇದಕ್ಕೆ ವಿದ್ಯುತ್ ಪೂರೈಕೆಯ ಅವಶ್ಯಕತೆಯಿದೆ. ಆದರೆ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿರೋದು ಆರಂಭದಲ್ಲೇ ವಿಘ್ನ ಉಂಟಾಗಿದೆ.

Mysugar Sugar Factory 2

ವಿದ್ಯುತ್ ಪೂರೈಕೆಗೆ ಮನವಿ:
ಮೈಶುಗರ್ ಕಾರ್ಖಾನೆಗೆ ವಿದ್ಯುತ್ ಪೂರೈಕೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ (Dinesh Guligowda) ಮನವಿ ಮಾಡಿ ಇಂಧನ ಸಚಿವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

ಮೈಶುಗರ್ ಹಲವು ವರ್ಷಗಳಿಂದ ನಷ್ಟಕ್ಕೆ ಸಿಲುಕಿದ್ದು, 40.86 ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯುವ ಅವಶ್ಯಕತೆ ಇರುವುದರಿಂದ ವಿದ್ಯುತ್ ಪೂರೈಕೆ ಮಾಡಿದರೆ, ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತದೆ. ಆದ್ದರಿಂದ ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article