ವಿಜಯಪುರ: ಮೈಸೂರು ವಿಮಾನ ನಿಲ್ದಾಣಕ್ಕೆ (Mysuru Airport) ಮೈಸೂರು ಮಹಾರಾಜರ ಹೆಸರು ಇಡಬೇಕು. ಮೈಸೂರು ಮಹಾರಾಜರ ದೂರ ದೃಷ್ಟಿಯಿಂದ ಮೈಸೂರು ಅಭಿವೃದ್ಧಿಯಾಗಿದೆ. ಏಷ್ಯಾದಲ್ಲಿ ಮೊದಲು ವಿದ್ಯುತ್ ಆಗಿದ್ದು ಜಯಚಾಮರಾಜೇಂದ್ರ ಒಡೆಯರ್ ಸಮಯದಲ್ಲಿ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಉತ್ತರ ಕರ್ನಾಟಕ ಯಾಕೆ ಅಭಿವೃದ್ಧಿ ಆಗಲಿಲ್ಲ ಅನ್ನೋದರ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಆದಿಲ್‍ಶಾಹಿ, ನಿಜಾಮ್ ಶಾಹಿಗಳಿಂದ ಈ ಭಾಗ ಅಭಿವೃದ್ಧಿ ಆಗಿಲ್ಲ ಎಂದರು. ಇದನ್ನೂ ಓದಿ: ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ
Advertisement
Advertisement
ಬಿಜೆಪಿ, ಹಿಂದೂ ಕಾರ್ಯಕರ್ತ ಮೇಲೆ ದೌರ್ಜನ್ಯ ವಿಚಾರಕ್ಕೆ ಮಾತನಾಡಿ, ದೌರ್ಜನ್ಯಕ್ಕೆ ಒಳಗಾಗದ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ನೆರವಿಗೆ ಬಿಜೆಪಿ ಇದೆ. ಬಿಜೆಪಿ ಕಾರ್ಯಕರ್ತರಿಗೆ ಕಾನೂನು ಹೋರಾಟಕ್ಕೆ ನೆರವು ನೀಡ್ತೇವೆ. ಅಲ್ಲದೆ ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿ ಆಫೀಸ್ ತೆರೆಯಲಾಗ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರು, ಅವರನ್ನ ಸ್ಟೇಷನ್ ಗೆ ಕರೆಯಿಸಿ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ತಿದ್ದಾರೆ. ಈ ದೌರ್ಜನ್ಯ ನಾವು ಸಹಿಸಲ್ಲ. ಪ್ರಚೋದನೆ ಮಾಡಿದ್ದರೇ ಬೇಕಾದ್ರೆ ಕ್ರಮ ಕೈಗೊಳ್ಳಲಿ. ವಾಕ್ ಸ್ವಾತಂತ್ರ್ಯ ಇದೆ, ಅಭಿವ್ಯಕ್ತಿ ಸ್ವಾತಂತ್ರ್ಯ ತಡೆಯುವ ಅವಕಾಶ ಇಲ್ಲ. ವಿನಾಕಾರಣ ದೌರ್ಜನ್ಯ ಸರಿ ಅಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
Advertisement
ಬಿಜೆಪಿ (BJP) ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯವಾದ್ರೆ ಕಾನೂನು ನೆರವಿಗೆ ನಾವು ಮುಂದಾಗುತ್ತೇವೆ. 2 ತಿಂಗಳಲ್ಲಿ ಕಚೇರಿ ಮಾಡ್ತೇವೆ, ಉಚಿತ ಕಾಲಿಂಗ್ ಸೇವೆಯನ್ನು ನೀಡಲಿದ್ದೇವೆ. ಸಾಕಷ್ಟು ವಕೀಲರು ನೆರವು ನೀಡಲು ಮುಂದೆ ಬಂದಿದ್ದಾರೆ. ಭಯ ಭೀತರಾಗಿದ್ದಾರೆ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡ್ತೇವೆ ಎಂದರು.
Advertisement
ಹೈಕೋರ್ಟ್‍ನಲ್ಲಿ (High Court) ಡಿಕೆಶಿ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನವರಿ 5ಕ್ಕೆ ಮತ್ತೆ ವಿಚಾರಣೆ ಪ್ರಾರಂಭವಾಗುತ್ತೆ. ನ್ಯಾಯಕ್ಕೆ ಜಯ ಸಿಕ್ಕಿಯೇ ಸಿಗುತ್ತೆ. ಭ್ರಷ್ಟಾಚಾರದ ವಿರುದ್ಧ ನಾವಿದ್ದೇವೆ. ನಾಳೆ ಕೊಲೆ ಆರೋಪಿಯನ್ನು ಸರ್ಕಾರ ವಾಪಸ್ ತೆಗೆದುಕೊಳ್ತೀನಿ ಅಂದ್ರೆ ಅರಾಜಕತೆ ಉಂಟಾಗುತ್ತೆ. ಡಿಕೆಶಿ ಕೇಸ್ ವಾಪಸ್ ಪಡೆದಿದ್ದು ಅರಾಜಕತೆ ಎಂದು ವಾಗ್ದಾಳಿ ನಡೆಸಿದರು.