– ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ
– ಹೊಸಪೇಟೆ ರೈಲು ನಿಲ್ದಾಣದಲ್ಲಿ ಪರಿಸ್ಥಿತಿ ಉದ್ವಿಗ್ನ
– ರೈಲು ಹೊರಡುತ್ತಿದ್ದಂತೆ ಜೈಶ್ರೀರಾಮ್ ಘೋಷಣೆ ಕೂಗಿದ ರಾಮಭಕ್ತರು
ಬಳ್ಳಾರಿ: ಅಯೋಧ್ಯೆಯಿಂದ ಮೈಸೂರಿಗೆ ಬರುತ್ತಿದ್ದ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಯುವಕನೊಬ್ಬ ಬೆದರಿಕೆ ಹಾಕಿದ ಘಟನೆ ಬಳ್ಳಾರಿಯ ಹೊಸಪೇಟೆ ರೈಲು ನಿಲ್ದಾಣದಲ್ಲಿ ನಡೆದಿದೆ.
ಅನ್ಯಕೋಮಿನ ಯುವಕ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದಿದ್ದಲ್ಲದೇ ಪದೇ ಪದೇ ಚೈನ್ ಎಳೆದ ಕಾರಣ ರೈಲು ಸುಮಾರು ಎರಡು ಘಂಟೆಗಳ ಕಾಲ ತಡವಾಗಿ ಚಲಿಸಿದೆ.
Advertisement
Advertisement
ಮೈಸೂರಿನಿಂದ ಅಯೋಧ್ಯೆಗೆ ತೆರಳಿದ್ದ ರಾಮ ಭಕ್ತರು ಮರಳಿ ರೈಲಿನಲ್ಲಿ ಮೈಸೂರಿಗೆ ಬರುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ರಾಮ ಭಕ್ತರು ಹಾಗೂ ಅನ್ಯಕೋಮಿನ ಯುವಕನ ಜೊತೆಯಲ್ಲಿ ವಾಗ್ವಾದ ನಡೆದಿದೆ. ಜಗಳ ಶುರುವಾದ ವೇಳೆ ಪದೇ ಪದೇ ಚೈನ್ ಎಳೆದ ಕಾರಣ ಟ್ರೈನ್ ಮುಂದೆ ಸಾಗಲು ತೊಂದರೆಯಾಗಿದೆ.
Advertisement
ಪರಿಸ್ಥಿತಿ ವಿಕೋಪಕ್ಕೆ ತೆರಳುವ ಮುನ್ನವೇ ಸ್ಥಳಕ್ಕೆ ಆಗಮಿಸಿದ ಎಸ್ಪಿ ಶ್ರೀಹರಿಬಾಬು ಹಾಗೂ ಸಿಬ್ಬಂದಿ, ಎಲ್ಲರ ಮನವೊಲಿಸಿ, ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ರೈಲು ಹೊರಡುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಶ್ರೀರಾಮನ ಭಕ್ತರು ನಿಲ್ದಾಣದಲ್ಲೇ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ.
Advertisement
ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು ಅನ್ಯಕೋಮೀನ ಯುವಕರನ್ನು ವಿಚಾರಣೆ ನಡೆಸಿ ಬೇರೆ ಬೋಗಿಯಲ್ಲಿ ಕಳುಹಿಸಿದ್ದಾರೆ.