ಮೈಸೂರು: ಆಧಾರ್ ಕಾರ್ಡ್ ಗಾಗಿ ರಾತ್ರಿಯಿಡೀ ಬ್ಯಾಂಕ್ ಮುಂದೆ ಮಲಗುವ ಸ್ಥಿತಿ ಮೈಸೂರು ಜಿಲ್ಲೆ ಟಿ.ನರಸೀಪುರ ಪಟ್ಟಣದಲ್ಲಿ ಎದುರಾಗಿದೆ.
ಕೋಟಕ್ ಮಹೇಂದ್ರ ಬ್ಯಾಂಕ್ ಮುಂದೆ ಆಧಾರ್ ಕಾರ್ಡ್ ಮಾಡಿಸಲು ರಾತ್ರಿಯೇ ಬಂದು ಮಹಿಳೆಯರು, ಮಕ್ಕಳು, ವಯೋವೃದ್ಧರು ಮಲಗಿದ್ದಾರೆ. ಒಂದು ದಿನಕ್ಕೆ ಕೇವಲ 15 ಜನರಿಗೆ ಮಾತ್ರ ಬ್ಯಾಂಕ್‍ನಲ್ಲಿ ಕಾರ್ಡ್ ಮಾಡಿ ಕೊಡಲಾಗುತ್ತಿದೆ. ಹೀಗಾಗಿ ರಾತ್ರಿಯೇ ಬಂದು ಬ್ಯಾಂಕ್ ಮುಂದೆ ಜನ ಮಲಗಿದ್ದಾರೆ.
Advertisement
Advertisement
ಪಟ್ಟಣದ ಮಿನಿವಿಧಾನಸೌಧದ ಕಚೇರಿಯಲ್ಲಿ ಆಧಾರ್ ಕಾರ್ಡ್ ಪ್ರಕ್ರಿಯೆ ಸ್ಥಗಿತಗೊಂಡಿದೆ. ಹೀಗಾಗಿ ಜನ ಅನಿವಾರ್ಯವಾಗಿ ಖಾಸಗಿ ಬ್ಯಾಂಕ್‍ಗಳ ಮುಂದೆ ಕಾದು ಕುಳಿತುಕೊಳ್ಳುವ ಸ್ಥಿತಿ ಬಂದಿದೆ. ದಿನನಿತ್ಯ ಆಧಾರ್ ಕಾರ್ಡ್‍ಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ.
Advertisement
ಸರ್ಕಾರದ ಯೋಜನೆಗಳ ಸವಲತ್ತು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಆಧಾರ್ ಕಾರ್ಡ್ ಮಾಡಿಸಲು ಜನರು ಪಡಬಾರದ ಪಾಡು ಪಡುತ್ತಿದ್ದಾರೆ.
Advertisement
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]