– ಇದು ಮೋದಿ ಸರ್ಕಾರದ ಯೋಜನೆ
ಮೈಸೂರು: ದಶಪಥದ ರಸ್ತೆ ಮೈಸೂರಿಗಾಗಿ ಇರೋದರಿಂದ ನಾನು ಹೆಚ್ಚು ಆಸಕ್ತಿ ತೆಗೆದುಕೊಂಡಿದ್ದೇನೆ ಎಂದು ಹೇಳುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.
Advertisement
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂಬ ಸುಮಲತಾ ಅಂಬರೀಶ್ ಹೇಳಿಕೆಗೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಯಾರಿಗೆ ಕಾಮಗಾರಿ ಬಗ್ಗೆ ಅನುಮಾನ ಇದೆಯೋ ಅಂತಹವರು ತಜ್ಞರನ್ನು ಕರೆದುಕೊಂಡು ಬಂದು ಪರಿಶೀಲನೆ ಮಾಡಿಸಿಕೊಳ್ಳಿ ಎಂದರು.
Advertisement
Advertisement
ಇದು ಮೋದಿ ಸರ್ಕಾರದ ಯೋಜನೆ:
ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಮೂರು ಸಂಸದರಿಗೆ ಸೇರುತ್ತದೆ ಎಂಬ ಹೇಳಿಕೆಗೂ ಸ್ಪಷ್ಟೀಕರಣ ರೂಪದ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಂದಿರುವುದು ಮೈಸೂರಿಗೋಸ್ಕರ ಮಾತ್ರ. ಮೈಸೂರು ಡೆಸ್ಟಿನೇಷನ್ ಎಂಬ ಕಾರಣಕ್ಕಾಗಿ ನಾನು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಮಂಡ್ಯದ ಮೇಲೆ ಹೋಗುತ್ತೆ ಅಂತಾ ಮಂಡ್ಯದವರು, ರಾಮನಗರದ ಮೇಲೆ ಹೋಗುತ್ತೆ ಅಂತಾ ರಾಮನಗರದವರು. ಈ ಕಾಮಗಾರಿ ನನ್ನದು ಅಂತಾ ಹೇಳಿಕೊಂಡರೇ ಅದಕ್ಕೆ ಅರ್ಥ ಇದೆಯಾ? ಎಂದು ಪ್ರಶ್ನಿಸಿದ ಅವರು ಇದು ಮೋದಿ ಸರ್ಕಾರದ ಯೋಜನೆ. ಈ ಯೋಜನೆಗೆ ಕಾಂಗ್ರೆಸ್ ನವರಿಂದ ಬಿಡಿಗಾಸು ಕೂಡ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ
Advertisement
ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ:
ಸಿದ್ದರಾಮಯ್ಯ ಅವರ ಹೇಳಿಕೆಗೂ ಅರ್ಥವಿಲ್ಲ. ಪದೇ ಪದೇ ಜನರಿಂದ ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ ಎಂದರು. ಸುಮಲತಾ ಅವರು ಈ ಯೋಜನೆಯ ಕಾಮಗಾರಿ ನನ್ನ ರಸ್ತೆ ಮೇಲೆ ಹೋಗುತ್ತದೆ ಎಂದರೆ ಏನು ಮಾಡಲು ಆಗಲ್ಲ. ಅವರಿಗೆ ಅವಶ್ಯಕತೆ ಇದ್ದರೆ ಮಂಡ್ಯದವರು ಮಂಡ್ಯದವರಗೆ, ರಾಮನಗರದವರು ರಾಮನಗರದವರೆಗೂ ಕಾಮಗಾರಿ ತರಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಟಿ20 ವರ್ಲ್ಡ್ ಕಪ್ – ಅಕ್ಟೋಬರ್ 24ರಂದು ಭಾರತ Vs ಪಾಕಿಸ್ತಾನ
ಈಗ ಕೆಲವರಿಗೆ ಅರ್ಥವಾಗಿದೆ:
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಭಾರತೀಯರಿಗೆ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಯಿತು ಎಂಬುದು ಈಗ ಅರ್ಥವಾಗಬೇಕು. ಮೋದಿಯವರು ಪರಿಸ್ಥಿತಿಯನ್ನು ಮೊದಲೇ ಅರ್ಥ ಮಾಡಿಕೊಂಡು ಸಿಎಎ ಕಾಯ್ದೆಯನ್ನು ಜಾರಿಗೊಳಿಸಿದರು. ಪ್ರತಿಯೊಬ್ಬ ಭಾರತೀಯರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
The Mysuru-Bengaluru 10 lane Highway will be completed by Dasara 2022. Guess what, you can travel from Blr to Mys in just 90 minutes!
Take a look at how this project is progressing!
Thank you @narendramodi ji , @nitin_gadkari ji, @MORTHIndia @MORTHRoadSafety pic.twitter.com/TnD341WYjj
— Pratap Simha (@mepratap) August 15, 2021
ಇವತ್ತು ಅಫ್ಘಾನಿಸ್ತಾನದ ಸುತ್ತಮುತ್ತ ಹಲವಾರು ಮುಸ್ಲಿಂ ರಾಷ್ಟ್ರಗಳಿದ್ದರೂ ಅವರನ್ನು ಕರೆಸಿಕೊಳ್ಳುತ್ತಿಲ್ಲ. ಷರಿಯಾ, ತಾಲಿಬಾನ್ ಮಾನವ ವಿರೋಧಿಯೆಂಬುದು ಇದೀಗ ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದ ಮನಃಸ್ಥಿತಿಯ ಜನರಿಲ್ಲ, ಭಾರತದಲ್ಲೂ ಅದೇ ಮನಃಸ್ಥಿತಿಯ ಜನರಿದ್ದಾರೆ. ಸಿಎಎ ಜಾರಿಗೆ ತಂದದ್ದು ಅಫ್ಘಾನಿಸ್ತಾನದ ಕಾರಣಕ್ಕಾಗಿ ಮಾತ್ರವಲ್ಲ. ಇತರ ಕಡೆಗಳಲ್ಲಿ ಈ ರೀತಿಯ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ. ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆ ಮುಸ್ಲಿಂ ರಾಷ್ಟ್ರಗಳಿಗೂ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್