ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ (Mysuru-Bengaluru Expressway) ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹಗೆ (Pratap Simha) ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ (Siddaramaiah), ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು. ಪ್ರತಾಪ್ ಸಿಂಹ ಅವರದ್ದಾಗಲಿ, ಬಿಜೆಪಿ (BJP) ಸರ್ಕಾರದ್ದಾಗಲಿ ಯಾವುದೇ ಪಾತ್ರ ಇಲ್ಲ. ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹೆಚ್.ಸಿ.ಮಹದೇವಪ್ಪನವರಿಗೆ (H.C Mahadevappa) ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನವರು ಮುಂದೆ ನಿಂತು ಈ ರಸ್ತೆಯನ್ನು ಮಾಡಿಸಿದರು ಎಂದರು. ಇದನ್ನೂ ಓದಿ: ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ: ಜನಾರ್ದನ ರೆಡ್ಡಿ
Advertisement
Advertisement
ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪ್ರಕರಣ ಕುರಿತು ಮಾತನಾಡಿ, ಅವರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷಪ್ಪನವರು ಎಲ್ಲಿದ್ದಾರೆ ಎಂಬುವುದು ಸರ್ಕಾರಕ್ಕೆ ಗೊತ್ತಿದೆ. ವಿರೂಪಾಕ್ಷಪ್ಪ ತಮ್ಮ ಮನೆಯಲ್ಲಿಯೇ ಓಡಾಡಿಕೊಂಡಿದ್ದಾರೆ. ಅವರನ್ನು ಬಂಧಿಸದೆ ಇವರು ನಾಟಕ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶೂಟಿಂಗ್ ವೇಳೆ ಅವಘಡ: ಅಮಿತಾಭ್ ಬಚ್ಚನ್ ಗೆ ಗಂಭೀರ ಗಾಯ
Advertisement
ವಿರೂಪಾಕ್ಷಪ್ಪನವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವರನ್ನು ಯಾಕೆ ಬಂಧಿಸಲಿಲ್ಲ? ಈಗ ಲುಕ್‌ಔಟ್ ನೋಟಿಸ್ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ ಅಷ್ಟೇ. ಭ್ರಷ್ಟಾಚಾರದ ಆರೋಪಕ್ಕೆ ಮಿಸ್ಟರ್ ಬೊಮ್ಮಾಯಿ (Basavaraj Bommai) ಅವರು ಸಾಕ್ಷಿ ಕೇಳುತ್ತಿದ್ದರು. ಈಗ ವಿರೂಪಾಕ್ಷಪ್ಪನವರು ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಆದರೆ ಇವರು ಏನು ಕ್ರಮ ತೆಗೆದುಕೊಂಡಿದ್ದಾರೆ? ಇವರಿಗೆ ಮುಜುಗರ ಆಗಿದೆ. ಆದರೂ ಇವರು ನಮಗೆ ಮುಜುಗರ ಇಲ್ಲಾ ಎಂದು ಹೇಳುತ್ತಿದ್ದಾರೆ. ಅಪ್ಪ ಅಧ್ಯಕ್ಷ ಆಗಿದ್ದ ಕಾರಣಕ್ಕೆ ಮಗನಿಗೆ ಲಂಚ ಕೊಡಲು ಬಂದಿದ್ದರು. ಹೀಗಾಗಿ ಅಪ್ಪನೇ ಮೊದಲ ಆರೋಪಿ. ಇವರನ್ನು ಮೊದಲು ಬಂಧಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ
ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಲೋಕಾಯುಕ್ತ ಬಂದ್ ಮಾಡಲಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದೆವು ಅಷ್ಟೇ. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇತ್ತು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್
ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ನ್ಯಾಯಾಲಯವೇ ಹೊರತು ಬಿಜೆಪಿ ಸರ್ಕಾರವಲ್ಲ. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೇ ಬಿಜೆಪಿಯವರ ಮನೆದೇವರು. ಹೀಗಾಗಿ ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಪಂಚರತ್ನ ಪ್ರಚಾರದ ವೇಳೆ ಜೆಡಿಎಸ್ ವಾಹನದ ಮೇಲೆ ಕಲ್ಲುತೂರಾಟ – ಚಾಲಕನಿಗೆ ಗಾಯ