ಮೈಸೂರು: ವಿವಾದಿತ ಗುಂಬಜ್ ಬಸ್ ನಿಲ್ದಾಣ (Bus Stand) ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಶೆಲ್ಟರ್ ನಲ್ಲಿದ್ದ ಮೂರು ಗೋಪುರದಲ್ಲಿ 2 ಚಿಕ್ಕ ಗೋಪುರ ತೆರವುಗೊಳಿಸಲಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ (Pratap Simha) ಟ್ವೀಟ್ ಮಾಡಿದ್ದು, ಶಾಸಕ ರಾಮದಾಸ್‌ಗೆ (SA Ramdas) ಧನ್ಯವಾದ ಹೇಳಿದ್ದಾರೆ.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು. pic.twitter.com/9b1wPLULJ4
— Pratap Simha (@mepratap) November 27, 2022
Advertisement
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕ-ಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ, ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ (Mysuru DC) ಹಾಗೂ ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು ಎಂದು ಟ್ವಿಟ್ಟರ್‌ನಲ್ಲಿ (Twitter) ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಕಲ್ಲು ತೂರಾಟದಿಂದ ಬಾಲಕನಿಗೆ ಗಾಯ – ಎಎಪಿ ಗುಜರಾತ್ ಮುಖ್ಯಸ್ಥನಿಂದ ಆರೋಪ
Advertisement
Advertisement
ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು. ಆದರೆ ಅನವಶ್ಯಕ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ. ಹೀಗಾಗಿ ವಿವಾದಿತ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಗೋಪುರ ತೆರವುಗೊಳಿಸಿರುವುದಾಗಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ (SA Ramdas) ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನ ವಿವಾದಿತ ಗುಂಬಜ್ ಬಸ್ ನಿಲ್ದಾಣ – ಮೂರರಲ್ಲಿ 2 ಗೋಪುರ ತೆರವು
Advertisement
ಈ ಹಿಂದೆ ಮಾತನಾಡಿದ್ದ ಶಾಸಕ ಎಸ್.ಎ.ರಾಮದಾಸ್, ನನ್ನನ್ನು ದಯಮಾಡಿ ಬಿಟ್ಟು ಬಿಡಿ ಕೈ ಮುಗಿದು ಕೇಳಿದ್ದರು. ನಾನು ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ನಷ್ಟದ ಹಣವನ್ನು ನನ್ನ ಸಂಬಳದಿಂದ ಭರಿಸುತ್ತೇನೆ. ಬಿಜೆಪಿಯ 11 ಜನ ಶಾಸಕರು ಇದ್ದರು. ಕಿರುಕುಳ ನೀಡಿ 10 ಜನ ಬೇರೆ ಪಕ್ಷಕ್ಕೆ ಹೊರಟು ಹೋದರು. ಉಳಿದಿರುವವನು ನಾನೊಬ್ಬನೇ. ದಯಮಾಡಿ ನನ್ನನ್ನು ಬಿಟ್ಟು ಬಿಡಿ ಏನೂ ಪ್ರಶ್ನೆ ಕೇಳಬೇಡಿ ಎಂದು ಮಾಧ್ಯಮ ಮಿತ್ರರ ಮುಂದೆ ಶಾಸಕರು ಕೈ ಮುಗಿದು ಬೇಡಿಕೊಂಡಿದ್ದರು. ಇದನ್ನೂ ಓದಿ: ಬೆಂಗ್ಳೂರಿನ ಸರ್ಕಾರಿ ಆಸ್ಪತ್ರೆಗೆ ಬಂತು ರೋಬೊ ಡಾಕ್ಟರ್ – ಏನಿದರ ವಿಶೇಷತೆ?
ಮೈಸೂರಿನ ಊಟಿ ಮುಖ್ಯ ರಸ್ತೆಯಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಭಾರೀ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಸ್ ನಿಲ್ದಾಣಕ್ಕೆ ರಾತ್ರೋ, ರಾತ್ರಿ ಜೆಎಸ್‌ಎಸ್ ಕಾಲೇಜ್ ಬಸ್ ನಿಲ್ದಾಣ ಎಂದು ನಾಮಫಲಕ ಅಳವಡಿಸಲಾಗಿತ್ತು. ಅಲ್ಲದೇ ಫಲಕದ ಒಂದು ಬದಿಯಲ್ಲಿ ಸುತ್ತೂರು ಆದಿ ಜಗದ್ಗುರುಗಳ ಹಾಗೂ ಸುತ್ತೂರು ಶ್ರೀ ರಾಜೇಂದ್ರ ಸ್ವಾಮೀಜಿಗಳ ಫೋಟೋ ಹಾಕಲಾಗಿತ್ತು. ಮತ್ತೊಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋವನ್ನು ಹಾಕಲಾಗಿತ್ತು.