ಮೈಸೂರು: ವಿವಾದಿತ ಗುಂಬಜ್ ಬಸ್ ನಿಲ್ದಾಣ (Bus Stand) ವಿಚಾರ ಸಂಬಂಧ ಇದೀಗ ಶೆಲ್ಟರ್ ನಲ್ಲಿದ್ದ ಮೂರು ಗೋಪುರದಲ್ಲಿ 2 ಚಿಕ್ಕ ಗೋಪುರ ತೆರವುಗೊಳಿಸಲಾಗಿದೆ.
Advertisement
ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು. ಆದರೆ ಅನವಶ್ಯಕ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ. ಹೀಗಾಗಿ ವಿವಾದಿತ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಗೋಪುರ ತೆರವುಗೊಳಿಸಿರುವುದಾಗಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ (S. A Ramdas) ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್ ಸಿಂಹ
Advertisement
Advertisement
ಮೈಸೂರಿನ ಊಟಿ ಮುಖ್ಯ ರಸ್ತೆಯಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಭಾರೀ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಸ್ ನಿಲ್ದಾಣಕ್ಕೆ ರಾತ್ರೋ, ರಾತ್ರಿ ಜೆಎಸ್‍ಎಸ್ ಕಾಲೇಜ್ ಬಸ್ ನಿಲ್ದಾಣ ಎಂದು ನಾಮಫಲಕ ಅಳವಡಿಸಲಾಗಿತ್ತು. ಅಲ್ಲದೇ ಫಲಕದ ಒಂದು ಬದಿಯಲ್ಲಿ ಸುತ್ತೂರು ಆದಿ ಜಗದ್ಗುರುಗಳ ಹಾಗೂ ಸುತ್ತೂರು ಶ್ರೀ ರಾಜೇಂದ್ರ ಸ್ವಾಮೀಜಿಗಳ ಫೋಟೋ ಹಾಕಲಾಗಿತ್ತು. ಮತ್ತೊಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಫೋಟೋವನ್ನು ಹಾಕಲಾಗಿತ್ತು. ಇದನ್ನೂ ಓದಿ: ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI
Advertisement
ವಿವಾದದ ಬಳಿಕ ಮಾತನಾಡಿದ್ದ ಶಾಸಕರು, ನನ್ನನ್ನು ದಯಮಾಡಿ ಬಿಟ್ಟು ಬಿಡಿ ಕೈ ಮುಗಿದು ಕೇಳಿದ್ದರು. ನಾನು ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ನಷ್ಟದ ಹಣವನ್ನು ನನ್ನ ಸಂಬಳದಿಂದ ಭರಿಸುತ್ತೇನೆ. ಬಿಜೆಪಿಯ 11 ಜನ ಶಾಸಕರು ಇದ್ದರು. ಕಿರುಕುಳ ನೀಡಿ 10 ಜನ ಬೇರೆ ಪಕ್ಷಕ್ಕೆ ಹೊರಟು ಹೋದರು. ಉಳಿದಿರುವವನು ನಾನೊಬ್ಬನೇ. ದಯಮಾಡಿ ನನ್ನನ್ನು ಬಿಟ್ಟು ಬಿಡಿ ಏನೂ ಪ್ರಶ್ನೆ ಕೇಳಬೇಡಿ ಎಂದು ಮಾಧ್ಯಮ ಮಿತ್ರರ ಮುಂದೆ ಶಾಸಕರು ಕೈ ಮುಗಿದು ಬೇಡಿಕೊಂಡಿದ್ದರು.