ಮೈಸೂರು: ಸಂತ್ರಸ್ತೆ ತನಿಖೆಗೆ ಸ್ಪಂದಿಸಬೇಕು. ಆದರೆ ಅವರು ನಮ್ಮೊಂದಿಗೆ ಸ್ಪಂದಿಸುತ್ತಿಲ್ಲ ಎಂಬುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ.
Advertisement
ಮೈಸೂರಿನಲ್ಲಿರುವ ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯ ರಕ್ಷಣೆ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇನೆ. ಆದರೆ ಅವರು ತನಿಖೆಗೆ ಪೊಲೀಸರೊಂದಿಗೆ ಸಹಕರಿಸಬೇಕು. ಪೊಲೀಸರು ಎಲ್ಲಾ ಆಯಾಮದಿಂದ ಕೇಸ್ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆ ನಾನು ಯಾರ ಜೊತೆನೂ ಮಾತನಾಡುವುದಿಲ್ಲ ಎಂದಿದ್ದಾರೆ. ಯುವತಿ ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ. ಸಂತ್ರಸ್ತೆ ಪೋಷಕರು ಕೂಡ ಯಾರೊಂದಿಗೂ ಮಾತನಾಡುವುದಿಲ್ಲ ಎಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ
Advertisement
Advertisement
ಪೊಲೀಸರು ಶೇ.100 ಅಲರ್ಟ್ ಆಗಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಗೃಹಮಂತ್ರಿಗಳು ಜಿಲ್ಲೆಗೆ ಬಂದಿದ್ದಾರೆ. ಅವರು ಎಲ್ಲಾ ಅಧಿಕಾರಿಗಳ ಸಭೆಯನ್ನು ಮಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
Advertisement
ವಿರೋಧ ಪಕ್ಷದವರು ನಮ್ಮನ್ನು, ಪೊಲೀಸರನ್ನು ವಿರೋಧ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು ಇರುವುದೇ ವಿರೋಧ ಮಾಡೋಕೆ. ಗೃಹ ಸಚಿವರು ಹಿರಿಯರಿದ್ದಾರೆ. ಪ್ರಕರಣದ ಗಂಭೀರತೆಯನ್ನು ಅವರು ಪರಿಗಣಿಸಿದ್ದಾರೆ. ಎಲ್ಲಾ ಮಾಹಿತಿ ಪಡೆದುಕೊಂಡು ಬಂದಿದ್ದಾರೆ. ಇವತ್ತು ಸಂಜೆ 4 ಗಂಟೆ ವರೆಗೆ ಜಿಲ್ಲೆಯಲ್ಲಿ ಇರುತ್ತಾರೆ. ಎಲ್ಲವನ್ನು ಅವರೇ ತಿಳಿಸುತ್ತಾರೆ. ನಾನು ಅವರಿಗೆ ಯಾವುದೇ ಮಾಹಿತಿ ಕೊಟ್ಟಿಲ್ಲ. ಅದಕ್ಕಾಗಿ ಅವರನ್ನು ಮಾತನಾಡಿಸಿಕೊಂಡು ಹೋಗಲು ಬಂದಿದ್ದೇನೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!