ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಭಕ್ತರಿಗೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ.
ಅರ್ಚಕರು ಮತ್ತು ಸಿಬ್ಬಂದಿ ಅನಿರ್ದಾಷ್ಟವಧಿ ಮುಷ್ಕರ ನಡೆಸುತ್ತಿದ್ದಾರೆ. ದೇವಸ್ಥಾನದ ಸಿಬ್ಬಂದಿ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಪ್ರತಿಭಟನಾ ಸಿಬ್ಬಂದಿ ಬೇಡಿಕೆಗೆ ಮಣಿದ ಪೊಲೀಸರು ಹೊರಗಡೆಯಿಂದಲೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
Advertisement
ಇಂದಿನಿಂದ ನೌಕರರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು. ದೇವಾಲಯದ 183 ಮಂದಿ ಖಾಯಂ ನೌಕರರು ಹಾಗೂ 37 ಮಂದಿ ಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಗರ್ಭಗುಡಿಯ ಮುಂಭಾಗವೇ ಅರ್ಚಕರು ಧರಣಿ ಕುಳಿತು ಪ್ರತಿಭಟನೆ ಆರಂಭಿಸಿದ್ದು, ದೇವಾಲಯದ ಒಳಗೆ ಹೊರಗೆ ಎರಡು ಕಡೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಭಟನೆ ನಡೆಯುತ್ತಿದೆ.
Advertisement
Advertisement
ಚಾಮುಂಡಿಬೆಟ್ಟದಲ್ಲಿ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೂಜೆ ಸಲ್ಲಿಸಿದ್ದ ಬಳಿಕ 8 ಗಂಟೆಯಿಂದ ಪೂಜೆ ಸ್ಥಗಿತಗೊಂಡಿದೆ. ಅಷ್ಟೇ ಅಲ್ಲದೇ ಗರ್ಭಗುಡಿಗೆ ಭಕ್ತರ ಪ್ರವೇಶವನ್ನು ನಿಷೇಧಿಸಿದ್ದರು. ಪರಿಣಾಮ ದೇವಾಲಯದ ಒಳಗೆ ಮಂಗಳಾರತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಕುಂಕುಮ ವಿತರಣೆ ಮತ್ತು ತಿರ್ಥ ವಿತರಣೆಯೂ ಸ್ಥಗಿತಗೊಂಡಿದ್ದು, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ದೇವರ ದರ್ಶನಕ್ಕೆ ಆಗಮಿಸಿದ್ದ ಭಕ್ತರು ಅರ್ಧದಿಂದಲೇ ದರ್ಶನ ಪಡೆದು ವಾಪಸ್ ಹೋಗುತ್ತಿದ್ದಾರೆ.
Advertisement
ದೇವಾಲಯಗಳ ನೌಕರರ ಪ್ರಮುಖ 7 ಬೇಡಿಕೆ:
1. ಶೇ.30ರಷ್ಟು ವೇತನ ಹೆಚ್ಚಳ ಹಾಗೂ ಹೆಚ್ಚುವರಿ ತುಟ್ಟಿಭತ್ಯೆ ಆದಾಗ ಮಂಜೂರು ಮಾಡಿಕೊಳ್ಳಲು ಖಾಯಂ ಆದೇಶ ನೀಡಬೇಕು.
2. ವಾರ್ಷಿಕ ಬೋನಸ್ ಪಾವತಿಸದಿರುವ ಬಗ್ಗೆ ಹಾಗೂ ಪ್ರತಿ ವರ್ಷ ಒಂದು ತಿಂಗಳ ಪೂರ್ತಿ ವೇತನವನ್ನ ಪಾವತಿಸಲು ಖಾಯಂ ಆದೇಶ ನೀಡಬೇಕು.
3. ತಾತ್ಕಾಲಿಕ ನೌಕರರನ್ನು ಖಾಯಂಗೊಳಿಸಲು ತುರ್ತಾಗಿ ಆದೇಶಿಸಬೇಕು.
4. ಅನುಕಂಪದ ಆಧಾರದ ಮೇಲೆ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರಾಜ್ಯದ ಎಲ್ಲಾ ಇಲಾಖೆಯಲ್ಲಿ ನೌಕರಿ ನೀಡಬೇಕು.
5. ದೇವಾಲಯದ ನೌಕರರಿಗೆ ವೈದ್ಯಕೀಯ ಸೌಲಭ್ಯವನ್ನ ಮಂಜೂರು ಮಾಡಬೇಕು.
6. ಮೃತ ದೇವಾಲಯದ ನೌಕರರುಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು.
7. ನೌಕರರ ತಿಂಗಳ ವೇತವನ್ನು ಬೆಟ್ಟದ ಶಾಖೆಯ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಬಟಾವಡೆ ಮಾಡಬೇಕು.
https://www.youtube.com/watch?v=8gyZUeLcgbM
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv