Connect with us

ಇಂದು ಸಂಜೆಯಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಇಂದು ಸಂಜೆಯಿಂದ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆ ಇವತ್ತು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇಂದು ರಾತ್ರಿ 7 ರಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಉತ್ತನಹಳ್ಳಿ ಗೇಟ್, ದೈವೀವನ ಗೇಟ್, ಲಲಿತಮಹಲ್ ಗೇಟ್ ಹಾಗೂ ಪಾದದ ಬಳಿ ಇರುವ ಮಾರ್ಗಗಳು ಬಂದ್ ಮಾಡಲಾಗುತ್ತದೆ. ತಾವರೆಕಟ್ಟೆ ಗೇಟ್‍ನಲ್ಲೂ ಇಂದು ರಾತ್ರಿ 9 ರಿಂದ ನಾಳೆ ಬೆಳಿಗ್ಗೆ 6 ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ರಾತ್ರಿ ವೇಳೆ ಮೋಜು ಮಸ್ತಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ. ಚಾಮುಂಡಿಬೆಟ್ಟಕ್ಕೆ ಬರುವವರು ಅರಣ್ಯ ಪ್ರದೇಶಕ್ಕೆ ಹೋಗುವ ಸಾಧ್ಯತೆ ಇದ್ದು, ಈ ವೇಳೆ ಅಪರಾಧ ಪ್ರಕರಣಗಳು ಸಂಭವಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.

Advertisement
Advertisement