ಮೈಸೂರು: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮನೆ ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ(ಐಟಿ) ದಾಳಿ ಪ್ರಕರಣ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಐಟಿ ದಾಳಿ ಬಗ್ಗೆ ಹೆಚ್‍ಡಿಕೆ ಪ್ರತಿಕ್ರಿಯೆ ನೀಡಿದರು. ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಅವರು ಯಡಿಯೂರಪ್ಪರನ್ನು ಭೇಟಿ ಮಾಡಿರುವುದೇ ಐಟಿ ದಾಳಿಗೆ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪುಟ್ಕೋಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸರ್ಕಾರ ತೆಗೆದ ಮಹಾನ್ ನಾಯಕ – ಸಿದ್ದು ವಿರುದ್ಧ ಹೆಚ್‍ಡಿಕೆ ವಾಗ್ದಾಳಿ
Advertisement
Advertisement
ಸಿದ್ದರಾಮಯ್ಯ ಪವರ್‍ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಭೇಟಿ ಸಹ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು. ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಅದಕ್ಕಾಗಿ ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ನಡೆದಿದೆ. ಒಟ್ಟಿನಲ್ಲಿ ಈ ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದರು.
Advertisement
Advertisement
ಇದೇ ವೇಳೆ ಸಿಂಧಗಿ ಉಪಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಲ್ಲಿ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲ. ಅಲ್ಲಿ ಕಾಂಗ್ರೆಸ್ ಯಾವಾಗಲೂ ಮೂರನೇ ಸ್ಥಾನದಲ್ಲಿದೆ. ಅಲ್ಲೇನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಪೈಪೋಟಿ. ನಾವು ಯೋಚನೆ ಮಾಡಿ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯಗೆ ಪಾಠ ಕಲಿಸಲು ಈ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯ ಯಾವ ದೊಣ್ಣೆನಾಯಕ ಅಂತಾ ಅವರು ಹೇಳಿದ ಅಭ್ಯರ್ಥಿ ಹಾಕಬೇಕು. ಎರಡು ಕ್ಷೇತ್ರದಲ್ಲಿ ಜೆಡಿಎಸ್ ಗಂಭೀರವಾಗಿ ಸ್ಪರ್ಧೆ ಮಾಡಲಿದೆ ಎಂದು ಹೆಚ್‍ಡಿಕೆ ತಿಳಿಸಿದರು. ಇದನ್ನೂ ಓದಿ: ರಾಷ್ಟ್ರರಾಜಕಾರಣಕ್ಕೆ ಸಿದ್ದರಾಮಯ್ಯ ಹೋಗ್ತಾರಾ?- ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ