ಮೈಸೂರು: ವಿಶ್ವ ವಿಖ್ಯಾತ ಮೈಸೂರಿನ ಜಂಬೂ ಸವಾರಿ ಕೇವಲ 20 ನಿಮಿಷದಲ್ಲಿ ಮುಕ್ತಾಯಗೊಂಡಿದೆ.
ಸಂಜೆ 4:32 ರ ಮೀನ ಲಗ್ನದಲ್ಲಿ ಮುಖ್ಯಮಂತ್ರಿಗಳು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಇದಾದ ಬಳಿಕ ಸಂಜೆ 5:25ಕ್ಕೆ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಜಂಬೂ ಸವಾರಿ ಆರಂಭವಾಯಿತು.
Advertisement
Advertisement
ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಮಾತ್ರ ಜಂಬೂ ಸವಾರಿ ನಡೆಯಿತು. 2ನೇ ಬಾರಿ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದ್ದ. ಇದನ್ನೂ ಓದಿ: ದಸರಾ ಸಂಭ್ರಮ – 16 ಕೆ.ಜಿ ಸೀರೆ ಉಡಿಸಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ
Advertisement
ಅರಮನೆ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದರೂ ಅರಮನೆ ವೀಕ್ಷಣೆಗೆ ಸಾವಿರಾರು ಮಂದಿ ಆಗಮಿಸಿದ್ದರು. ಹೀಗಾಗಿ ಅರಮನೆ ಆವರಣದಿಂದಲೇ ಜನರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಇನ್ನೂ 9 ದಿನ ವಿಸ್ತರಣೆ: ಬೊಮ್ಮಾಯಿ
Advertisement
ಈ ಬಾರಿಯ ಸರಳ ದಸರಾಗೆ ಕೇವಲ 6 ಟ್ಯಾಬ್ಲೋಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಹೀಗಾಗಿ ಜಂಬೂ ಸವಾರಿ ವೇಳೆ 6 ಸ್ತಬ್ಧಚಿತ್ರಗಳು ಮಾತ್ರ ಭಾಗಿ ಆಗಿತ್ತು.