ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara-2022) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ದಿನ ಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿ ಮೆರವಣಿಗೆ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಲಿರುವುದು ವಿಶೇಷ. ಮೆರವಣಿಗೆಗಾಗಿ ಕ್ಯಾಪ್ಟನ್ ಅಭಿಮನ್ಯು (Abhimanyu) ಮತ್ತು ಟೀಂ ಭರ್ಜರಿ ತಾಲೀಮು ನಡೆಸುತ್ತಿವೆ.
Advertisement
ಹೌದು. ಕಳೆದ 2 ವರ್ಷಗಳ ಹಿಂದೆ ಇಡೀ ರಾಷ್ಟ್ರವನ್ನು ಬಿಟ್ಟು ಬಿಡದೇ ಕಾಡುತ್ತಿದ್ದ ಕೊರೋನಾದಿಂದ ದಸರಾ ಮಹೋತ್ಸವದ ಸಂಭ್ರಮ ಮಂಕಾಗಿ ಹೋಗಿತ್ತು. ದಸರಾ ಮಹೋತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾಗಿದ್ದವು. ಅಲ್ಲದೇ ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈ ಬಾರಿ ಕೊರೋನಾ (Corona Virus) ಮಹಾಮಾರಿಯಿಂದ ನಾವುಗಳು ದೂರವಾಗಿರುವ ಕಾರಣ ದಸರಾ ಮಹೋತ್ಸವ ಎಂದಿನಂತೆ ವಿಜೃಂಭಣೆಯಿಂದ ಜರುಗಲಿದೆ.
Advertisement
Advertisement
ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯ ಆವರಣದಿಂದ ಬನ್ನಿಮಂಟಪದವರೆಗೆ ಸಾಗಲಿದೆ. ಮೂರನೇ ಬಾರಿಗೆ ಅಂಬಾರಿ ಹೊರುತ್ತಿರುವ ಅಭಿಮನ್ಯು 6.30 ಕಿಲೋಮೀಟರ್ ಜಂಬೂಸವಾರಿ ಮೆರವಣಿಗೆಯಲ್ಲಿ ಗಾಂಭೀರ್ಯದ ರಾಜನಡಿಗೆ ಹಾಕಲಿದ್ದಾನೆ. ಇದನ್ನೂ ಓದಿ: ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ
Advertisement
ಅಕ್ಟೋಬರ್ 5ರಂದು ಇಡೀ ವಿಶ್ವವೇ ಸಾಂಸ್ಕೃತಿಕ ನಗರಿ ಮೈಸೂರಿನ ಕಡೆಗೆ ತಿರುಗಿ ನೋಡಲಿದೆ. ಯಾಕಂದ್ರೆ ಅಂದು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಜರುಗಲಿದೆ. ಅಂದು ಸಂಜೆ 5 ಗಂಟೆ 7ನಿಮಿಷದಿಂದ 5.18ರ ವರೆಗೆ ಸಲ್ಲುವ ಶುಭ ಮೀನಾ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗಣ್ಯರು ಅಂಬಾರಿಯಲ್ಲಿ ಕೂತ ನಾಡದೇವತೆ ಚಾಮುಂಡೇಶ್ವರಿ (Chamundeshwari)ಗೆ ಪುಷ್ಪಾರ್ಚಾನೆ ಸಲ್ಲಿಸಿ, ಜಂಬೂ ಸವಾರಿ ಮೆರವಣಿಗೆ ಚಾಲನೆ ನೀಡಲಿದ್ದಾರೆ.
6.30 ಕಿಲೋಮೀಟರ್ ದೂರವನ್ನು ಕ್ರಮಿಸಲು ಅಭಿಮನ್ಯು & ಟೀಮ್‍ಗೆ 2 ಗಂಟೆಗಳು ಬೇಕಾಗುತ್ತದೆ. ಅಂದ್ರೆ 5.20 ರಿಂದ 7.30ರ ವರೆಗೆ ಜಂಬೂ ಸವಾರಿ ಮೆರವಣಿಗೆ ಜರುಗಲಿದೆ. ಅಷ್ಟೊತ್ತಿಗೆ ಸೂರ್ಯ ಮುಳುಗಿದ ಕಾರಣ ಕತ್ತಲು ಆವರಿಸಿರುತ್ತದೆ. ಹೀಗಾಗಿ ಜಂಬೂ ಸವಾರಿ ಮೆರವಣಿಗೆ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಬೇಕಾಗಿದೆ. ಅಂದು ದಸರಾ ಗಜಪಡೆಗೆ ವಿದ್ಯುತ್ ದೀಪಾಲಂಕಾರಕ್ಕೆ ಬೆದರಬಾರದೆಂದು ಸದ್ಯ ವಿದ್ಯುತ್ ದೀಪಾಲಂಕಾರದ ನಡುವೆ ತಾಲೀಮು ಮಾಡಿಸಲಾಗುತ್ತಿದೆ.
ಒಟ್ಟಾರೆ ಕೊರೋನಾ ರಣಕೇಕೆಯಿಂದ ಮಂಕಾಗಿದ್ದ ಕಳೆದ ಎರಡು ವರ್ಷದ ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ವಿದ್ಯುತ್ ದೀಪಾಲಂಕಾರದ ನಡುವೆ ಇಡೀ ವಿಶ್ವವನ್ನೇ ತನ್ನತ್ತ ಸೆಳೆಯಲಿದೆ.