ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2024) ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ (Hampa Nagarajaiah) ಅವರಿಗೆ ಆಹ್ವಾನ ನೀಡಲಾಗಿದೆ.
ಮೈಸೂರು ದಸರಾ 2024 ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ, ಏಕೆ ರಾಜೀನಾಮೆ ಕೊಡ್ಬೇಕು? – ಹೆಚ್‌ಡಿಕೆ ಗರಂ
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರು.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಿದರು. ಸೆಂಟ್ರಲ್ ಕಾಲೇಜಿಗೆ ಸೇರಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದಾಗಲೇ BMTC ಬಸ್ ಚಾಲಕನಿಗೆ ಹೃದಯಾಘಾತ – ಟ್ರಾಫಿಕ್ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್!
ಹಂಪನಾ ಅವರ ಸಾಹಿತ್ಯ ಸೇವೆಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಕಾವ್ಯಾನಂದ ಪುರಸ್ಕಾರ, ತಮ್ಮಣರಾವ ಅಮ್ಮಿನಭಾವಿ ಸ್ಮಾರಕ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಜೋಶಿ ಪ್ರಶಸ್ತಿ, ಆಚಾರ್ಯ ಸುಮತಿ ಸಾಗರ ಶ್ರುತ ಸಂವರ್ಧನ ಪುರಸ್ಕಾರಗಳು ಸಂದಿವೆ.