ಮೈಸೂರು: ಈ ವರ್ಷದ ಜಂಬೂ ಸವಾರಿಗೆ ಅರಣ್ಯಾಧಿಕಾರಿಗಳು 14 ಆನೆಗಳನ್ನು ಆಯ್ಕೆ ಮಾಡಿದ್ದಾರೆ.
Advertisement
ಡಿಸಿಎಫ್ ಕರಿಕಾಳನ್ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಹೈ ಪವರ್ ಕಮೀಟಿ ಮೀಟಿಂಗ್ ಮುನ್ನ ಆನೆಗಳನ್ನು ಆಯ್ಕೆ ಮಾಡಿದೆ. ಸದ್ಯ ವಿವಿಧ ಕ್ಯಾಂಪ್ ಗಳಿಂದ 14 ಆನೆಗಳನ್ನ ಪಟ್ಟಿ ಮಾಡಿ ಬೆಂಗಳೂರಿನ ಮುಖ್ಯ ಅರಣ್ಯ ಕಚೇರಿಗೆ ಕಳುಹಿಸಲಾಗಿದೆ. ಸರ್ಕಾರ ಸರಳ ದಸರಾ ಆಚರಣೆಗೆ ಮುಂದಾದ್ರೆ ಕೇವಲ ಏಳು ಆನೆಗಳನ್ನು ಮೈಸೂರಿಗೆ ಕರೆಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ.
Advertisement
Advertisement
ಆನೆ ಕಾಡು, ದುಬಾರೆ, ಮತ್ತಿಗೋಡು, ಬಂಡೀಪುರ ಆನೆ ಶಿಬಿರದಿಂದ ಆನೆಗಳ ಆಯ್ಕೆ ಮಾಡಲಾಗಿದೆ. ಸದ್ಯ ವಿಕ್ರಮ್, ವಿಜಯಾ, ಅಭಿಮನ್ಯು, ಗೋಪಾಲಸ್ವಾಮಿ, ಭೀಮಾ, ಮಹೇಂದ್ರ, ಧನಂಜಯ, ಪ್ರಶಾಂತ್, ಗೋಪಿ, ಹರ್ಷ, ಕಾವೇರಿ, ಲಕ್ಷ್ಮಣ, ಚೈತ್ರಾ, ಮಹಾರಾಷ್ಟ್ರ ಭೀಮಾ ಆನೆಗಳ ಆಯ್ಕೆಯಾಗಿದೆ. ಇದನ್ನೂ ಓದಿ: ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ
Advertisement
ಸರಳ ದಸರಾವಾದರೆ 14 ಆನೆಗಳಲ್ಲಿ 7 ಆನೆಗಳು ನಾಡಿಗೆ ಕರೆಸಿಕೊಳ್ಳಲು ಚಿಂತನೆ ನಡೆದಿದೆ. ಕಳೆದ ವರ್ಷ 5 ಆನೆ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯದ ಹಾಗೂ ಮುಂಜಾಗ್ರತ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಇದನ್ನೂ ಓದಿ:ಡಾಲಿಗೆ ಜೋಡಿಯಾದ ಆರ್‌ಎಕ್ಸ್ 100 ಚೆಲುವೆ