ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2026) ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಜಂಬೂಸವಾರಿಯಲ್ಲಿ ಸ್ಯಾಂಡಲ್ವುಡ್ (Sandalwood) ತಾರೆಯರು ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಲಿದೆ.
ಕಲಾ ತಂಡಗಳು ಹಾಗೂ ಸ್ತಬ್ಧಚಿತ್ರಗಳ ಜೊತೆಗೆ ಕನ್ನಡ ಚಿತ್ರರಂಗದ ನಟ-ನಟಿಯರೂ ಮೆರವಣಿಗೆಯಲ್ಲಿ ಸಾಗಲಿದ್ದಾರೆ.
ಇದೇ ಮೊದಲ ಬಾರಿಗೆ ಜಂಬೂಸವಾರಿಯಲ್ಲಿ ಚಂದನವನದ ಹಲವು ತಾರೆಯರು ವಿಶೇಷ ಅಂಬಾರಿ ಬಸ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ. ಎರಡು ಅಂಬಾರಿ ಬಸ್ಗಳಲ್ಲಿ ತಾರೆಯರ ಮೆರವಣಿಗೆ ನಡೆಯಲಿದೆ.
ಯಾರೆಲ್ಲಾ ಭಾಗಿಯಾಗಲಿದ್ದಾರೆ?
ಕ್ರೇಜಿಸ್ಟಾರ್ ರವಿಚಂದ್ರನ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಸಲಗ ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಡಾಲಿ ಧನಂಜಯ್, ನಟ ರಮೇಶ್ ಅರವಿಂದ್, ವಿನಯ್ ರಾಜಕುಮಾರ್ ಹಾಗೂ ಯುವ ರಾಜಕುಮಾರ್ ಭಾಗವಹಿಸುವ ನಿರೀಕ್ಷೆಯಿದೆ.
ನಟಿಯರಾದ ರಚಿತಾ ರಾಮ್, ರುಕ್ಮಿಣಿ ವಸಂತ್, ಸಪ್ತಮಿ ಗೌಡ, ಅಮೃತಾ ಅಯ್ಯಂಗಾರ್ ಹಾಗೂ ಹಿರಿಯ ನಟಿ ಶ್ರುತಿ ಸೇರಿದಂತೆ ಹಲವು ಕಲಾವಿದರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಹಾಗೂ ಪದಾಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ.
ಜಂಬೂಸವಾರಿಯಲ್ಲಿ ಭಾಗಿಯಾಗದ ಸ್ಟಾರ್ಗಳ್ಯಾರು?
ಕೆಲವು ಪ್ರಮುಖ ನಟರು ಈ ಬಾರಿ ಜಂಬೂಸವಾರಿಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ. ಶಿವರಾಜ್ಕುಮಾರ್ ಬ್ಯಾಂಕಾಕ್ಗೆ ತೆರಳಿದ್ದಾರೆ. ಧ್ರುವ ಸರ್ಜಾ ಪ್ಯಾರಿಸ್ಗೆ ಹೋಗಿದ್ದಾರೆ. ನಟ ಅರ್ಜುನ್ ಸರ್ಜಾ ಅವರ ಎರಡನೇ ಮಗಳು ಅಂಜನಾ ಅವರ ಮದುವೆ ಕಾರ್ಯಕ್ರಮ ಇರುವುದರಿಂದ ಅವರು ಭಾಗವಹಿಸುವುದಿಲ್ಲ ಎನ್ನಲಾಗಿದೆ.
ಇನ್ನು ನಟ ಯಶ್ ‘ರಾಮಾಯಣ’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ನಟಿ ರಮ್ಯಾ ದೆಹಲಿಯಲ್ಲಿರುವುದಾಗಿ ಮಾಹಿತಿ ಇದೆ.
ಒಟ್ಟಿನಲ್ಲಿ, ಮೈಸೂರು ದಸರಾ ಜಂಬೂಸವಾರಿಗೆ ಈ ಬಾರಿ ಸ್ಯಾಂಡಲ್ವುಡ್ ತಾರೆಯರ ಆಗಮನ ಮತ್ತಷ್ಟು ಮೆರುಗು ನೀಡುವ ನಿರೀಕ್ಷೆಯಿದೆ. ಸಾಂಪ್ರದಾಯಿಕ ಮೆರವಣಿಗೆಯ ಜೊತೆಗೆ ಕನ್ನಡ ಚಿತ್ರರಂಗದ ಕಲಾವಿದರನ್ನು ನೋಡಲು ಅಭಿಮಾನಿಗಳೂ ಕಾತರದಿಂದ ಕಾಯುತ್ತಿದ್ದಾರೆ.
