ಮೈಸೂರು: ವಿಶ್ವವಿಖ್ಯಾತ ದಸರಾವನ್ನು ಡ್ರೋನ್ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಖಾಸಗಿಯವರು ಹಾಗೂ ಮಾಧ್ಯಮಗಳು ಡ್ರೋನ್ ಕ್ಯಾಮೆರಾ ಬಳಸುವಂತಿಲ್ಲ. ಭದ್ರತೆಯ ದೃಷ್ಟಿಯಿಂದ ಒಂದು ಡ್ರೋನ್ ಕ್ಯಾಮೆರಾವನ್ನು ಬಳಸಲು ಪೊಲೀಸ್ ಇಲಾಖೆ ಮುಂದಾಗಿದೆ ಎಂದು ಅವರು ತಿಳಿಸಿದರು.
Advertisement
ದಸರಾ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ 720 ರೌಡಿಶೀಟರ್, ಹಳೆಯ ಪಿಕ್ ಪ್ಯಾಕೇಟರ್ಗಳನ್ನು ವಶಕ್ಕೆ ಪಡೆಯಲಾಗುವುದು. 40 ಮೊಬೈಲ್ ಪ್ಯಾಟ್ರೋಲ್ ಹಾಗೂ 100ಕ್ಕೂ ಹೆಚ್ಚು ಮಫ್ತಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Advertisement
ಸೆ. 22 ರಿಂದ 24ರ ವರೆಗೆ ಹಾಗೂ ಸೆ. 28ರಿಂದ ಅಕ್ಟೋಬರ್ 2ರವರೆಗೆ ಬೆಳಗ್ಗೆ 6 ರಿಂದ ರಾತ್ರಿ 9.30 ರವರೆಗೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಮಹಲ್ ಹೆಲಿಪ್ಯಾಡ್ನಿಂದ ಉಚಿತ ಸಾರಿಗೆ ಬಸ್ಗಳ ವ್ಯವಸ್ಥೆ ಮಾಡಲಾಗುತ್ತದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್ ಬಳಿ ನಿಲುಗಡೆಗೆಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.