ಮೈಸೂರು: ಈರುಳ್ಳಿ ಬೆಲೆ ದುಬಾರಿ ಆಗಿರುವ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದ್ದು, ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡುವವರ ವಿರುದ್ಧ ಕ್ರಮ ತೆಗದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಗಳು ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿಗೆ ಆದೇಶ 1986ರ(ತಿದ್ದುಪಡಿ 2019) ಪ್ರಕಾರ, ನಗರದಲ್ಲಿ ಈರುಳ್ಳಿ ವ್ಯಾಪಾರಿಗಳು ಜಿಲ್ಲಾಧಿಕಾರಿಯಿಂದ ಲೈಸೆನ್ಸ್ ಪಡೆಯುವುದು ಕಡ್ಡಾಯ. ತಾಲೂಕಿನಲ್ಲಿನ ಮಾರಾಟಗಾರರು ಆಯಾ ತಾಲೂಕಿನ ತಹಶಿಲ್ದಾರರ್‍ರಿಂದ ಲೈಸೆನ್ಸ್ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಆದೇಶಿಸಲಾಗಿದೆ.
Advertisement
Advertisement
ಸರ್ಕಾರದ ಆದೇಶದಂತೆ ಈರುಳ್ಳಿ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ದಾಸ್ತಾನು ಮಾಡಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ದಾಸ್ತಾನು ಮಾಡಬೇಕು. ಲೈಸೆನ್ಸ್ ಇಲ್ಲದೆ ಅದಕ್ಕಿಂತ ಹೆಚ್ಚಿನ ಈರುಳ್ಳಿ ದಾಸ್ತಾನು ಮಾಡಿದರೆ, ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Advertisement
Advertisement
ಜಿಲ್ಲಾಧಿಕಾರಿಗಳ ಈ ಆದೇಶದಿಂದ ಈರುಳ್ಳಿಗೆ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ. ಇಂದಿನಿಂದ ಈರುಳ್ಳಿ ಅಂಗಡಿಗಳ ಮೇಲೂ ಆಹಾರ ಇಲಾಖೆ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.