ಆಷಾಢದ ಮೊದಲ ಶುಕ್ರವಾರಕ್ಕೆ ತಾಯಿ ಚಾಮುಂಡಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

Public TV
1 Min Read
chamundi Temple 3

ಮೈಸೂರು: ಆಷಾಢ (Ashadha)ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ (Mysuru) ಚಾಮುಂಡಿ ಬೆಟ್ಟಕ್ಕೆ (Chamundi Hills) ಭಕ್ತ ಸಾಗರವೇ ಹರಿದು ಬಂದಿದೆ. ಬೆಳಗ್ಗೆ 5:30 ರಿಂದ ರಾತ್ರಿ 12 ಗಂಟೆಯ ವರೆಗೆ ತಾಯಿ ಚಾಮುಂಡಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ.

chamundi Temple 5

 

ಆಷಾಢ ಮಾಸದ ಮೊದಲ ಶುಕ್ರವಾರ ದೇವಿ ಭಕ್ತರನ್ನು ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಈ ಬಾರಿಯ ಆಷಾಢದಲ್ಲಿ 5 ಶುಕ್ರವಾರಗಳು ಸಿಗಲಿದ್ದು ಆ ದಿನಗಳಲ್ಲಿ ದೇವಿಗೆ ವಿಶೇಷ ಪೂಜೆಗಳು ನೆರವೇರಲಿದೆ. ಭಕ್ತರಿಗೆ ಪ್ರಸಾದ ವಿತರಣೆ ಮಾಡುವವರು ಅಧಿಕಾರಿಗಳಿಂದ ಅನುಮತಿ ಪಡೆಯಲು ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ? – ಹೆಚ್‌ಡಿಕೆ ಟೀಕೆ

ಬೇರೆ ಬೇರೆ ಕಡೆಯಿಂದ ಬರುವ ಭಕ್ತರಿಗಾಗಿ ಉಚಿತವಾಗಿ 50 ಕೆಎಸ್‌ಆರ್‌ಟಿಸಿ (KSRTC) ಬಸ್‍ಗಳನ್ನು ಜಿಲ್ಲಾಡಳಿತ ವ್ಯವಸ್ಥೇ ಮಾಡಿದೆ. ಟ್ರಾಫಿಕ್ ಜಾಮ್ ಉಂಟಾಗದಂತೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಖಾಸಗಿ ವಾಹನಗಳಿಗೆ ಲಲಿತ್ ಮಹಲ್ ಹೆಲಿಪ್ಯಾಡ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿಶೇಷ ದರ್ಶನಕ್ಕೆ 50 ರೂ. 300 ರೂ. ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ 46 ಶಾಶ್ವತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ ಆದಷ್ಟು ಪ್ಲಾಸ್ಟಿಕ್‍ನ್ನು ಬಳಸದೆ ಆಷಾಢ ಆಚರಿಸುವ ಪಣ ತೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಗೆಲ್ಲಲು ವಿರೋಧ ಪಕ್ಷಗಳು ಸಜ್ಜು – ಬಿಜೆಪಿ ಸೋಲಿಸಲು ಇಂದು ಬಿಹಾರದಲ್ಲಿ ಹೈವೋಲ್ಟೇಜ್ ಸಭೆ

Share This Article