DistrictsKarnatakaLatestLeading NewsMain PostMysuru

ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ

- ವಿವಾದದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ

ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ.

ಯೋಗ ವೇದಿಕೆಯಲ್ಲಿ ರಾಜವಂಶಸ್ಥರಿಗೆ ಆಹ್ವಾನವಿಲ್ಲ ಎಂಬ ಅಭಿಯಾನ ಶುರುವಾದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಗಣ್ಯರ ಪಟ್ಟಿಯಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರನ್ನು ಸೇರಿಸಲಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ – ಬೆಂಗ್ಳೂರಿಗೊಂದು ಮೈಸೂರಿಗೊಂದು ರೂಲ್ಸ್

ಅರಮನೆಯ ಯೋಗ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯದುವೀರ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ, ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ, ಕೇಂದ್ರ ಆಯುಷ್ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೂ ವೇದಿಕೆಯ ಯೋಗಾಭ್ಯಾಸದಲ್ಲಿ ಭಾಗಿಯಾಗಲಿದ್ದಾರೆ.  ಇದನ್ನೂ ಓದಿ: ರಾಷ್ಟ್ರಪತಿ ಪದವಿಗೆ ದೇವೇಗೌಡರ ಸ್ಪರ್ಧೆ ಇಲ್ಲ: ಕುಮಾರಸ್ವಾಮಿ

ಯೋಗಾಭ್ಯಾಸದ ನಂತರ ಮೈಸೂರು ಅರಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಇರಲಿದೆ. ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಆಹ್ವಾನದ ಮೇರೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಸುಮಾರು ಒಂದು ಗಂಟೆಗಳ ಕಾಲ ಅರಮನೆಯಲ್ಲಿ ರಾಜವಂಶಸ್ಥರ ಜೊತೆ ಮೋದಿ ಮಾತುಕತೆ ನಡೆಯಲಿದೆ.

ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿದ್ಧಪಡಿಸಿದ್ದ ಗಣ್ಯರ ಪಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಅವರ ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ರಾಜವಂಶಸ್ಥರಿಗೆ ಆಹ್ವಾನವಿಲ್ಲವೆಂಬ ಅಭಿಯಾನ ಶುರುವಾಗಿತ್ತು. ನಿನ್ನೆಯಷ್ಟೇ ಇದಕ್ಕೆ ಸ್ಪಷ್ಟನೆ ನೀಡಿದ್ದ ಸಂಸದ ಪ್ರತಾಪ್ ಸಿಂಹ, ಗಣ್ಯರ ಪಟ್ಟಿ ಸಿದ್ಧವಾಗುತ್ತಿದೆ. ಮೈಸೂರು ರಾಜವಂಶಸ್ಥರ ಬಗ್ಗೆ ಎಲ್ಲರಿಗಿಂತ ಅತಿಯಾದ ಗೌರವ ನಮಗಿದೆ. ಮಹಾರಾಜರ ಬಗ್ಗೆ ಹಗುರವಾಗಿ ಮಾತಾಡಿದಾಗ ಮೊದಲು ಧ್ವನಿ ಎತ್ತಿದ್ದು ನಾನು ಎಂದು ಸಮರ್ಥಿಸಿಕೊಂಡಿದ್ದರು.

Live Tv

Leave a Reply

Your email address will not be published.

Back to top button