ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಬಳಿಕ ಯುವತಿಯ ಮೇಲೆ ಅತ್ಯಾಚಾರವೆಸಗಿದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರೇಮ್ ಪಟೇಲ್(28) ಬಂಧಿತ ಟೆಕ್ಕಿ. ಈ ಘಟನೆ ಮೈಸೂರು ಜಿಲ್ಲೆಯ ಕುವೆಂಪುನಗರ ಎಂ ಬ್ಲಾಕ್ನಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪ್ರೇಮ್ ಪಟೇಲ್, ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದನು. 6 ತಿಂಗಳಿಂದ ಪ್ರೀತಿಸಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.
Advertisement
ಆ ಬಳಿಕ ಈ ಯುವತಿಯನ್ನ ವಂಚಿಸಿ ಮತ್ತೊಂದು ಯುವತಿಯ ಜೊತೆ ಸಂಪರ್ಕ ಬೆಳೆಸಿದ್ದು, ಇದೀಗ ಯುವತಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಪ್ರಕರಣ ಸಂಬಂಧ ಯುವತಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Advertisement
ಸದ್ಯ ಅತ್ಯಾಚಾರವೆಸಗಿದ ಆರೋಪದ ಮೇಲೆ ಪ್ರೇಮ್ ಪಟೇಲ್ನ್ನ ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Advertisement