ಮೈಸೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

Public TV
1 Min Read
MYS RAPE 3

ಮೈಸೂರು: ರಾಜ್ಯದಲ್ಲಿ ಬೆಚ್ಚಿಬೀಳಿಸುವ ಕೃತ್ಯವೊಂದು ನಡೆದು ಹೋಗಿದೆ. ಅರಮನೆ ನಗರಿ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

MYS RAPE

ಈ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ. ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ.

MYS RAPE 4

ಹೊರ ವಲಯದ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ನೋಡಿ ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಯುವತಿ ಹಾಗೂ ಆತನ ಪ್ರಿಯಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

MYS RAPE 5

ಯುವತಿ ಉತ್ತರ ಪ್ರದೇಶ ಮೂದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಈ ಘಟನೆ ಸಂಬಂಧ 4-5 ಮಂದಿಯ ಮೇಲೆ ಎಫ್ ಐಆರ್ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *