ಮೈಸೂರು: ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಆಸಿಫಾ ಅತ್ಯಾಚಾರ ಘಟನೆ ಖಂಡಿಸಿ ಜಿಲ್ಲೆಯ ಉದಯಗಿರಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನಗರ ಪೊಲೀಸ್ ಆಯುಕ್ತರು ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಕಲ್ಲು ತೂರಾಟ ವೇಳೆ ಎಂಟು ಮಂದಿಗೆ ಗಾಯವಾಗಿದ್ದು, ಘಟನೆಯಲ್ಲಿ ಎಸ್‍ಐ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಸದ್ಯ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗಿದೆ.
Advertisement
Advertisement
ನಡೆದಿದ್ದು ಏನು?
ಇಂದು ನಗರದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆದಿದ್ದ ಸಂಘಟನೆ ಬಳಿಕ ಮಧ್ಯಾಹ್ನದ ವೇಳೆಗೆ ಬಂದ್ ಗೆ ಕರೆ ನೀಡಿದೆ. ಅಲ್ಲದೇ ಒತ್ತಾಯ ಪೂರ್ವಕವಾಗಿ ನಗರದ ಅಂಗಡಿ ಮುಂಗಟ್ಟು ಮುಚ್ಚಲು ಯತ್ನಿಸಿದ್ದ ವೇಳೆ ಮಾಲೀಕರ ಜೊತೆ ವಾಗ್ವಾದ ನಡೆದಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣ ತರಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ ಈ ವೇಳೆ ಏಕಾಏಕಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ.
Advertisement
ಘಟನೆ ಬಳಿಕ ಮಾಹಿತಿ ಪಡೆದ ಹಿಂದೂ ಸಂಘಟನೆಯ ಹಲವು ಕಾರ್ಯಕರ್ತರು ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಈ ಘಟನೆಗೆ ಪ್ರತಿಭಟನೆ ನಡೆಸಲು ಅನುಮತಿ ಪಡೆದಿದ್ದ ಎಸ್‍ಡಿಪಿಐ ಸಂಘಟನೆ ಕಾರಣ ಎಂದು ಆರೋಪಿಸಿದರು.
Advertisement
ಪ್ರತಿಭಟನೆ ನಡೆಸುವ ಹೆಸರಿನಲ್ಲಿ ಇದನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ. ಈ ಹಿಂದೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದ ವೇಳೆ ಎಲ್ಲಿಯೂ ಪ್ರತಿಭಟನೆ ನಡೆಸಿರಲಿಲ್ಲ. ಆಗ ಇವರು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.