– ಹುಣಸೂರಿನ ಜನರಿಗೆ ಕ್ಷಮೆ ಕೇಳುತ್ತೇನೆ
ಮೈಸೂರು: ಚುನಾವಣೆ ಎದುರಿಸುವಷ್ಟು ಆರ್ಥಿಕ ವ್ಯವಸ್ಥೆ ನನ್ನಲ್ಲಿ ಇಲ್ಲ. ಆದ್ದರಿಂದ ನಾನು ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸುವುದಿಲ್ಲ ಎಂದು ಮಾಜಿ ಸಚಿವ ಜಿಟಿ ದೇವೇಗೌಡರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪಚುನಾವಣೆಯಲ್ಲಿ ನಾನು ಯಾರ ಪರವು ಇಲ್ಲ ವಿರುದ್ಧವು ಇಲ್ಲ. ನಾನು ನನ್ನ ಮಗನಿಗೆ ಬಿಜೆಪಿಯಿಂದ ಟಿಕೆಟ್ ನೀಡಿ ಎಂದು ಕೇಳಿಲ್ಲ. ಚುನಾವಣೆಯನ್ನು ಎದುರಿಸುವ ಆರ್ಥಿಕ ವ್ಯವಸ್ಥೆ ನನ್ನಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
ನಾನು ನನ್ನ ಮಗನಿಗೆ ಬಿಜೆಪಿಯಿಂದ ಟಿಕೆಟ್ ಕೇಳಿಲ್ಲ. ಹುಣಸೂರಿನ ಜನ ನನ್ನ ಮೇಲೆ ಅಭಿಮಾನ ಇಟ್ಟಿದ್ದಾರೆ. ನಿಮ್ಮ ಮಗ ಅಥವಾ ಪತ್ನಿ ನಿಲ್ಲಿಸಿ ಎಂದು ಕಳೆದ ಚುನಾವಣೆಯಲ್ಲೂ ಕೇಳಿದ್ದರು. ಆದರೆ ನನ್ನ ಮಗನನ್ನ ಚುನಾವಣೆಗೆ ನಿಲ್ಲಿಸುವ ಶಕ್ತಿ ನನ್ನಲ್ಲಿ ಇಲ್ಲ. ಚುನಾವಣೆ ಎದುರಿಸುವಷ್ಟು ಆರ್ಥಿಕ ವ್ಯವಸ್ಥೆ ನನ್ನಲ್ಲಿ ಇಲ್ಲ. ನಾನು ಹುಣಸೂರು ಉಪಚುನಾವಣೆಗೆ ನನ್ನ ಮಗನನ್ನ ನಿಲ್ಲಿಸಲ್ಲ. ಇದಕ್ಕಾಗಿ ಹುಣಸೂರಿನ ಜನರಿಗೆ ಕ್ಷಮೆ ಕೇಳಿದ್ದೇನೆ ಎಂದು ಹೇಳಿದ್ದಾರೆ.
ಉಪಚುನಾವಣಾ ಕ್ಷೇತ್ರಗಳ ಪೈಕಿ ಅತೀ ಹೆಚ್ಚು ಪ್ರತಿಷ್ಠೆಯ ಕಣ ಆಗಿರುವ ಹುಣಸೂರು ಕ್ಷೇತ್ರದಿಂದ ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರು ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಕಾಂಗ್ರೆಸ್ ನಿಂದ ಹೆಚ್.ಪಿ ಮಂಜುನಾಥ್ ಸ್ಪರ್ಧಿಸಿದ್ದಾರೆ. ಜೆಡಿಎಸ್‍ನಿಂದ ಸೋಮಶೇಖರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.