ಮೈಸೂರು: ಎದುರಾಳಿಯ ಒಂದೇ ಒಂದು ಏಟಿಗೆ ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಬಾಕ್ಸರ್ ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ.
ನಿಖಿಲ್ (24) ಮೃತಪಟ್ಟ ಕಿಕ್ ಬಾಕ್ಸರ್. ಜುಲೈ 10 ರಂದು ಬೆಂಗಳೂರಿನ ಕೆಂಗೇರಿಯಲ್ಲಿ A-1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಸ್ಪರ್ಧೆ ಆಯೋಜನೆಗೊಂಡಿತ್ತು. ಈ ವೇಳೆ ರಿಂಗ್‌ನಲ್ಲಿ ಸೆಣಸಾಡುತ್ತಿದ್ದಂತೆ ಎದುರಾಳಿಯ ಏಟಿಗೆ ನಿಖಿಲ್ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ತುಂಬಿ ಹರಿಯುತ್ತಿರೋ ಕಪಿಲೆಯಲ್ಲಿ ಈಜಲು ತೆರಳಿ ಯುವಕ ನಾಪತ್ತೆ
ಎದುರಾಳಿ ತಲೆಗೆ ಹೊಡೆದ ಒಂದೇ ಏಟಿಗೆ ಬಾಕ್ಸಿಂಗ್ ರಿಂಗ್ ನಲ್ಲಿಯೇ ನಿಖಿಲ್ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನಗಳ ಕಾಲ ಕೋಮಾದಲ್ಲಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾರೆ.