Connect with us

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೈಸೂರು ಲೋಕಾಯುಕ್ತ ಎಸ್‍ಪಿ ದುರ್ಮರಣ

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೈಸೂರು ಲೋಕಾಯುಕ್ತ ಎಸ್‍ಪಿ ದುರ್ಮರಣ

ಬೆಂಗಳೂರು: ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೈಸೂರಿನ ಲೋಕಾಯುಕ್ತ ಎಸ್ಪಿ ರವಿ ಕುಮಾರ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ರಾತ್ರಿ ಮೈಸೂರಿಗೆ ಲೋಕಾಯುಕ್ತ ಎಸ್‍ಪಿ ರವಿಕುಮಾರ್ ಚಾಲಕ ಕಿರಣ್ ಜೊತೆ ಸರ್ಕಾರಿ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ತೆರಳುತ್ತಿದ್ದರು. ಕುಂಬಳಗೋಡುವಿನ ರಾಮೋಹಳ್ಳಿ ಬಳಿ ತೆರಳುತ್ತಿದ್ದಾಗ ರಾತ್ರಿ 7.45ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ವೇಗವಾಗಿ ಬಂದು ಡಿವೈಡರ್‍ಗೆ ಬಡಿದು ಸ್ವಿಫ್ಟ್ ಕಾರಿಗೆ ಗುದ್ದಿದೆ.

ಟಿಪ್ಪರ್ ಗುದ್ದಿದ ರಭಸಕ್ಕೆ ಚಾಲಕ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಎಸ್‍ಪಿ ಅವರನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ರವಿಕುಮಾರ್ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement