ಬಾಗಲಕೋಟೆ: ಮನೆಯವರು ಒಪ್ಪಲಿಲ್ಲ ಅನ್ನೋ ಕಾರಣಕ್ಕೆ ಪ್ರೇಮಿಗಳಿಬ್ಬರು ಊರು ಬಿಟ್ಟು ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನೆಡೆದಿದೆ.
ನವೀನ್ ಕುಮಾರ್ ಹಾಗೂ ಮಾರಿಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರೇಮಿಗಳು. ಮೂಲತಃ ಮೈಸೂರು ಜಿಲ್ಲೆಯ ಅಶೋಕಪುರಂ ನಗರದ ನಿವಾಸಿಗಳಾದ ನವೀನ್ ಕುಮಾರ್ ಹಾಗೂ ಮಾರಿಯಾ ಕಳೆದ ನಾಲ್ಕು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ವಿಷಯ ಇಬ್ಬರ ಮನೆಯಲ್ಲೂ ಗೊತ್ತಾದಾಗ ಮನೆಯವ್ರು ಇವರ ಪ್ರೀತಿಯನ್ನ ಒಪ್ಪಿರಲಿಲ್ಲ. ಹೀಗಾಗಿ ಮನನೊಂದ ಪ್ರೇಮಿಗಳು ಟ್ರೇನ್ ಮೂಲಕ ಮೈಸೂರಿನಿಂದ ಬಾಗಲಕೋಟೆ ನಗರಕ್ಕೆ ಬಂದಿಳಿದಿದ್ದಾರೆ.
ಬೆಳಗಿನ ಜಾವ ಬಾಗಲಕೋಟೆ ನಗರಕ್ಕೆ ಆಗಮಿಸಿದ್ದ ಪ್ರೇಮಿಗಳು ಹಳೇ ಕೋರ್ಟ್ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿದು ಸುತ್ತಮುತ್ತಲಿನ ಜನರ ಸಹಾಯದಿಂದ ಈ ಪ್ರೇಮಿಗಳನ್ನ 108 ಮೂಲಕ ಜಿಲ್ಲಾ ಆಸ್ಪತ್ರೆಗೆ ರವಾನಿಸಿಲಾಗಿದೆ.
ಸದ್ಯ ಈ ಪ್ರೇಮಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.