ಮೈಸೂರು: ಜಿಲ್ಲೆಯ ಮಹಾ ನಗರ ಪಾಲಿಕೆ ಅಧಿಕಾರಿಗಳು ದಿಢೀರನೆ ನಗರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.
ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಅಕ್ರಮವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಂಡ ಬಗ್ಗೆ ಹಲವು ದೂರುಗಳು ಮಹಾ ನಗರ ಪಾಲಿಕೆಗೆ ಬಂದಿವೆ. ಈ ದೂರುಗಳ ಆಧಾರದ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಿ ಅಕ್ರಮ ಅಂಗಡಿಗಳ ತೆರವು ಶುರು ಮಾಡಿದ್ದಾರೆ. ಅಕ್ರಮವಾಗಿ ತಲೆ ಎತ್ತಿದ್ದ ಫುಟ್‍ಪಾತ್ ಮಳಿಗೆಗಳ ತೆರವು ಕಾರ್ಯಾಚರಣೆ ಇಂದಿನಿಂದ ಶುರುವಾಗಿದೆ.
Advertisement
Advertisement
ವಿಜಯನಗರದಲ್ಲಿ ಈ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಮೈಸೂರು ಮಹಾ ನಗರ ಪಾಲಿಕೆಯ ವಲಯ ಕಚೇರಿ 5ರ ಅಧಿಕಾರಿಗಳು ಯೋಗಾನರಸಿಂಹಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಇದ್ದ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿದರು. ಹೆಲ್ತ್ ಇನ್ಸ್ಪೆಕ್ಟರ್ ಶೃತಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಈ ಮಧ್ಯೆ ನೋಟಿಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಂಗಡಿ ಮಾಲೀಕರ ಅಸಮಾಧಾನ ವ್ಯಕ್ತಪಡಿಸಿದರು.