Connect with us

Crime

ನಾಯಿಗೆ ಲೈಂಗಿಕ ಕಿರುಕುಳ – ವಿಕೃತ ಕಾಮುಕನ ವಿರುದ್ಧ ಎಫ್‍ಐಆರ್

Published

on

ಮೈಸೂರು: ನಾಯಿಗೆ ಲೈಂಗಿಕ ಕಿರುಕುಳ ವಿಕೃತ ಕಾಮುಕನೊಬ್ಬನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಆರೋಪಿ ಯುವಕನನ್ನು ಸೋಮಶೇಖರ್ ಎಂದು ಗುರುತಿಸಲಾಗಿದೆ. ಈತ ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಈತನ ವಿರುದ್ಧ ಪೀಪಲ್ ಫಾರ್ ಅನಿಮಲ್ ಸಂಸ್ಥೆ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿತ್ತು.

ಫೆ.11ರ ರಾತ್ರಿ ವೇಳೆ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಾಮುಕನ ಈ ವರ್ತನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದರು. ಈ ದೃಶ್ಯಗಳನ್ನು ಆಧರಿಸಿ ಪಿಎಫ್‍ಎ ಅಧಿಕಾರಿ ಕೆ.ಬಿ. ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಈ ವೀಡಿಯೋ ಆಧರಿಸಿ ಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 1860 (ಯು /ಎಸ್ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 (ಯು/ಇಎಸ್?-11(1)(ಎ)) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Click to comment

Leave a Reply

Your email address will not be published. Required fields are marked *