– ಸರ್ಪ್ರೈಸ್ ತೋರಿಸುತ್ತೇನೆ ಎಂದು ಕರೆಸಿ ಕೃತ್ಯವೆಸಗಿದಳು
ಮೈಸೂರು: ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಮದುವೆಯಾಗಬೇಕಿದ್ದ ಹುಡುಗಿಯೇ ಚಾಕುವಿನಿಂದ ಇರಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ.
ಸುರಗಳ್ಳಿ ಗ್ರಾಮದ ರವಿಕುಮಾರ್ ಚಾಕು ಇರಿತಕೊಳಗಾದ ಯುವಕ. ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದ ಯುವತಿ. ನಾಲ್ಕು ತಿಂಗಳ ಹಿಂದೆ ಇಬ್ಬರಿಗು ವಿವಾಹ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ನಿನಗೆ ಸರ್ಪ್ರೈಸ್ ತೋರಿಸುತ್ತೇನೆ ಎಂದು ಯುವಕನ ಕಣ್ಣಿಗೆ ಬಟ್ಟೆ ಕಟ್ಟಿ ಯುವತಿ ಈ ಕೃತ್ಯವೆಸಗಿದ್ದಾಳೆ. ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಯುವತಿ, ವ್ಯಾಸಂಗ ಮಾಡಲು ಇಷ್ಟ ಇತ್ತು. ಆದರೆ ಮನೆಯಲ್ಲಿ ಎಷ್ಟೇ ಹೇಳಿದರೂ ಕೇಳದೆ ಮದುವೆ ನಿಶ್ಚಯ ಮಾಡಿದರು. ಇದರಿಂದ ಬೇಸತ್ತು ತಾನೇ ಚಾಕು ಇರಿದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.
ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.