ಮೈಸೂರು: ಪಂಚೆಯಲ್ಲೇ ಓಡುತ್ತಿದ್ದ ಉನ್ನತ ಶಿಕ್ಷಣ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದಾರೆ. ಅದೃಷ್ಟವಶಾತ್ ಸಚಿವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.
ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಚಿವರಾದ ಸಾರಾ ಮಹೇಶ್ ಹಾಗೂ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು.
ಮ್ಯಾರಥಾನ್ ಚಾಲನೆ ಬಳಿಕ ಸಚಿವರು ಓಟಗಾರರ ಜೊತೆಗೆ ಸ್ಪರ್ಧೆ ನೀಡಲು ಮುಂದಾದರು. ಆದರೆ ಪಂಚೆ ಧರಿಸಿದ್ದ ಜಿ.ಟಿ.ದೇವೇಗೌಡ ಅವರು, ಪಂಚೆಯನ್ನು ಎರಡೂ ಕೈಯಲ್ಲಿ ಹಿಡಿದುಕೊಂಡು ವೇಗವಾಗಿ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ಕಾಲು ತೊಡರಾಗಿ ನೆಲಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯವಾಗಿಲ್ಲ. ಸಚಿವರು ಬೀಳುತ್ತಿದ್ದಂತೆ ಇಬ್ಬರು ಕ್ಯಾಮೆರಾ ಮೆನ್ ಹಾಗೂ ಒಬ್ಬರು ಮ್ಯಾರಥಾನ್ ಸ್ಪರ್ಧಿ ಅವರ ಕೈ ಹಿಡಿದು ಮೇಲೆತ್ತಿದ್ದಾರೆ.
ಇದಕ್ಕೂ ಮುನ್ನ ಮ್ಯಾರಥಾನ್ ಉದ್ಘಾಟನೆಗೆ ಸಚಿವರಾದ ಜಿಟಿ ದೇವೇಗೌಡ ಮತ್ತು ಸಾರಾ ಮಹೇಶ್ ಒಂದೂವರೇ ಗಂಟೆ ತಡವಾಗಿ ಬಂದಿದ್ದರು. ಇದರಿಂಗಾಗಿ ಸ್ಪರ್ಧಿಗಳು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=rcI0vmfDiW0