ಮೈಸೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಸಿಎಂ ಕುಮಾರಸ್ವಾಮಿ ಅವರನ್ನು ಹೊಗಳಿ ವೇದಿಕೆಯಲ್ಲೇ ಎರಡು ಮನವಿಯನ್ನು ಇಟ್ಟಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಎಂದರೆ ಅಂತಃಕರಣ ಎಂದು ಹೇಳಿ ಮಹಿಷಾ ದಸರಾ ಮತ್ತು ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸಿ ಎಂದು ಕೇಳಿಕೊಂಡರು.
ಮಹಿಷಾ ದಸರಾ ಆಚರಿಸುವುದನ್ನು ತಡೆಯಬೇಕು. ಇಂತಹ ಆಚರಣೆಯಿಂದಾಗಿ ನಮ್ಮ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ. ಇದರ ಜೊತೆಯಲ್ಲಿ ಮೈಸೂರು ರಾಜವಂಶಸ್ಥರಿಗೆ ಕಿರುಕುಳ ನೀಡಿದ ವ್ಯಕ್ತಿಯ ಜಯಂತಿ ಮಾಡುವುದನ್ನು ನಿಲ್ಲಿಸಿ ಎಂದು ಟಿಪ್ಪು ಹೆಸರನ್ನು ಹೇಳದೇ ಟಿಪ್ಪು ಜಯಂತಿ ರದ್ದು ಮಾಡಿ ಎಂದು ಸಿಎಂಗೆ ಮನವಿ ಮಾಡಿದರು. ಇದನ್ನು ಓದಿ: ಮೈಸೂರಿನಲ್ಲಿ ಪ್ರಗತಿಪರರಿಂದ ಮಹಿಷಾ ದಸರಾ!- ವಿಡಿಯೋ ನೋಡಿ
ಸಚಿವೆ ಜಯಾಮಾಲ ಅವರನ್ನು ಉದ್ದೇಶಿಸಿ ಅಣ್ಣವ್ರ ಜೊತೆ ಇವರ ನಟನೆ ನೋಡಿ ನಾನು ಮನಸೋತಿದ್ದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಬುಧವಾರ ಬೆಳಗ್ಗೆ 7.05ರ ಶುಭ ತುಲಾ ಲಗ್ನದಲ್ಲಿ ಇನ್ಫೋಸಿಸ್ ಫೌಂಡೇಷನ್‍ನ ಸುಧಾಮೂರ್ತಿ 408ನೇ ನಾಡಹಬ್ಬವನ್ನು ಉದ್ಘಾಟಿಸಿದರು. ಸಿಎಂ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವರಾದ ಸಾ.ರಾ.ಮಹೇಶ್, ರಾಜಶೇಖರ್ ಪಾಟೀಲ್, ಜಯಮಾಲಾ, ಶಾಸಕರಾದ ಎಚ್.ವಿಶ್ವನಾಥ್, ಎಸ್.ಎ.ರಾಮದಾಸ್, ಅಶ್ವಿನ್ ಕುಮಾರ್, ಹರ್ಷಕುಮಾರ್, ಕೆ.ಮಹದೇವ್, ಎಲ್.ನಾಗೇಂದ್ರ, ಕೆ.ಟಿ.ಶ್ರೀಕಂಠೇಗೌಡ ಈ ವೇಳೆ ಉಪಸ್ಥಿತರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv