ಬೆಂಗಳೂರು: ಮುಡಾ ಪ್ರಕರಣದಲ್ಲಿ (MUDA Case) ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಕ್ಲೀನ್ ಚಿಟ್ ನೀಡಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
ತನಿಖಾಧಿಕಾರಿ ಎಸ್‌ಪಿ ಉದೇಶ್ ಇಂದು ಬೆಳಗ್ಗೆ ಅಂತಿಮ ವರದಿಯ ಜೊತೆ ನ್ಯಾಯಾಲಯಕ್ಕೆ ಆಗಮಿಸಿ ಸಲ್ಲಿಕೆ ಮಾಡಿದರು.
50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ.
ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ. ಇದನ್ನೂ ಓದಿ: ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್ – ಪ್ರಚೋದನೆ ನೀಡಿದ್ದ ಮೌಲ್ವಿ 11 ದಿನಗಳ ಬಳಿಕ ಅರೆಸ್ಟ್
ಬಿ ರಿಪೋರ್ಟ್ ಎಂದರೇನು?
ಪ್ರಕರಣ ಸುಳ್ಳು ಎಂದು ಕಂಡುಬಂದರೆ ಮತ್ತು ಆರೋಪಿಯ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲದೇ ಇದ್ದರೆ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡುತ್ತಾರೆ.