ಮೈಸೂರು: ಶಾಸಕ ಎಸ್.ಎ.ರಾಮದಾಸ್ ಅವರನ್ನು ಡಿಸಿಎಂ ಮಾಡುವಂತೆ ಸಿಎಂ ಯಡಿಯೂರಪ್ಪಗೆ ಶಿಫಾರಸು ಮಾಡುವುದಾಗಿ ಪೇಜಾವರ ಶ್ರೀಗಳು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಶ್ರೀಗಳು, ರಾಮದಾಸ್ ಪರವಾಗಿ ಸಿಎಂ ಯಡಿಯೂರಪ್ಪ ಅಥವಾ ಅಮಿತ್ ಶಾ ಜೊತೆ ದೂರವಾಣಿಯಲ್ಲಿ ಮಾತನಾಡಿಲ್ಲ. ಆದರೆ ಸೂಕ್ತ ಸಂದರ್ಭ ನೋಡಿ ಡಿಸಿಎಂ ಸ್ಥಾನಕ್ಕೆ ಶಿಫಾರಸು ಮಾಡುತ್ತೇನೆ ಎಂದು ರಾಮದಾಸ್ ಪರ ಪೇಜಾವರ ಶ್ರೀಗಳು ಬ್ಯಾಟಿಂಗ್ ಮಾಡಿದ್ದಾರೆ.
ಸೋಮವಾರವಷ್ಟೇ ತಾನು ಜಾತಿ ಆಧಾರದಲ್ಲಿ ಯಾರ ಪರವೂ ಸ್ಥಾನ ಕೇಳುವುದಿಲ್ಲ ಎಂದಿದ್ದ ಪೇಜಾವರ ಶ್ರೀಗಳು ಈಗ ಸೂಕ್ತ ಸಂದರ್ಭ ನೋಡಿ ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಅವರನ್ನು ಡಿಸಿಎಂ ಸ್ಥಾನಕ್ಕೆ ಮಾತುಕತೆ ನಡೆಸುವುದಾಗಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಒಟ್ಟಿನಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಪಕ್ಷದ ನಾಯಕರಲ್ಲಿ ಅಸಮಾಧಾನದ ಹೊಗೆಯಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುತ್ತಾ ಅನ್ನೋ ಪ್ರಶ್ನೆ ಮೂಡಿದೆ.