ಮೈಸೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲೂ ಆಶಾ ಕಾರ್ಯಕರ್ತೆಯ ಮೇಲೆ ದೌರ್ಜನ್ಯ ನಡೆದಿದೆ.
ಬನ್ನಿಮಂಟಪ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಅವರಿಗೆ ಆಲೀಂ ನಗರದಲ್ಲಿ ಮೂವರು ಪುಂಡರು ಧಮ್ಕಿ ಹಾಕಿದ್ದಾರೆ.
Advertisement
Advertisement
ಸುಮಯಾ ಅವರು ಕೊರೊನಾ ಲಕ್ಷಣಗಳ ಬಗ್ಗೆ ಸರ್ವೆ ಮಾಡಲು ತೆರಳಿದ್ದರು. ಈ ವೇಳೆ ಮೂವರು ಪುಂಡರು ಸುಮಯಾ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದಿಕೊಳ್ಳಿ ಎಂದಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಶಾ ಕಾರ್ಯಕರ್ತೆ ಮೇಲೆ ಮುಗಿಬಿದ್ದಿದ್ದಾರೆ.
Advertisement
ಭಾನುವಾರ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಕೂಡ ಇಂತದ್ದೇ ಘಟನೆ ನಡೆದಿತ್ತು. ಕೊರೊನಾ ಸೋಂಕಿತರು ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
Advertisement
ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಪುಂಡರು ಗುಂಪು ಗುಂಪಾಗಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಚೆಕ್‍ಪೋಸ್ಟ್ ಧ್ವಂಸಗೊಳಿಸಿದ್ದರು. ಘಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪಾದರಾಯನಪುರಕ್ಕೆ ಪೊಲೀಸರ ನಿಯೋಗವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಗರುಡ ಟೀಂ ಎಂಟ್ರಿ ಕೊಟ್ಟಿದೆ. ಘಟನೆಗೆ ಸಂಬಂಧಿಸಿದಂತೆ 60 ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಈ ಸಂಬಂಧ ಆಶಾ ಕಾರ್ಯಕರ್ತೆ ಎನ್ ಆರ್ ಠಾಣೆಗೆ ದೂರು ನೀಡಿದ್ದಾರೆ.