ಮೈಸೂರು: ನಗರದ ವಿವಿಧ ಕಡೆಗಳಲ್ಲಿ ಸರ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಆಲನಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮಹಮದ್ ಸಾದ್ (21) ಹಾಗೂ ಮಹಮದ್ ಮೊಯಿಬ್ (23) ಬಂಧಿತ ಆರೋಪಿಗಳು. ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಎಂಟು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳು ಕೇವಲ ಒಂದೇ ಪ್ರದೇಶದಲ್ಲಿ ಕೃತ್ಯ ಎಸಗದೇ ನಗರದ ವಿವಿಧ ಭಾಗಗಳಲ್ಲಿ ಕೈಚಳಕ ತೋರಿದ್ದಾರೆ.
ಈ ಮೂಲಕ ಬಂಧಿತ ಆರೋಪಿಗಳಿಂದ ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 380 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 2 ಬೈಕ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv