ಮೈಸೂರು: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.
ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು. ಇದನ್ನೂ ಓದಿ: ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ
Advertisement
Advertisement
ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.
Advertisement
ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ವೀರಪ್ಪನ್ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ
Advertisement
ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Web Stories