DistrictsKarnatakaLatestMain PostMysuru

ಮೃತನ ಕುಟುಂಬಕ್ಕೆ ಬಹುಮಾನದ ಹಣ ನೀಡಿದ ಮೈಸೂರು ಪೊಲೀಸರು

ಮೈಸೂರು: ಪೊಲೀಸರಿಗೆ ಮಾನವೀಯತೆ, ಅನುಕಂಪವೇ ಇಲ್ಲ ಎನ್ನುವ ಜನರಿಗೆ ಮೈಸೂರಿನ ಪೊಲೀಸರು ಮೃತಪಟ್ಟ ಯುವಕನ ಕುಟುಂಬಕ್ಕೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.


ಮೈಸೂರಿನ ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ಆ.23 ರಂದು ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‍ನಲ್ಲಿ ನಡೆದಿದ್ದ ಶೂಟೌಟ್ ಮತ್ತು ದರೋಡೆ ಪ್ರಕರಣ ನಡೆದಿತ್ತು. ಗುಂಡಿನ ದಾಳಿಗೆ ದಡದಹಳ್ಳಿ ಯುವಕ ಚಂದ್ರು ತುತ್ತಾಗಿದ್ದರು. ಈ ಪ್ರಕರಣವನ್ನು ಪೊಲೀಸರು ಶೀಘ್ರವಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ:  ರಾಜ್ಯದ ಹಲವೆಡೆ ನಾಲ್ಕು ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಈ ಹಿನ್ನೆಲೆ ರಾಜ್ಯ ಸರ್ಕಾರ ಮೈಸೂರು ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಅವರಿಗೆ ಬಂದ ಬಹುಮಾನದ ಹಣವನ್ನು ಕಮಿಷನರ್ ಮತ್ತು ಅವರ ತಂಡ ತಮ್ಮ ಚಂದ್ರು ಕುಟುಂಬಕ್ಕೆ ಒಂದು ಲಕ್ಷ ರೂ. ನೆರವು ನೀಡುವ ಮೂಲಕ ಪೊಲೀಸರಿಗೂ ಮಾನವೀಯತೆ ಇದೆ ಎಂದು ನಿರೂಪಿಸಿದ್ದಾರೆ. ಇದನ್ನೂ ಓದಿ:  ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ

ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ನಗದು ಹಣವನ್ನು ಮೃತನ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ವೇಳೆ ಡಿಸಿಪಿಗಳಾದ ಪ್ರದೀಪ್ ಗುಂಟಿ, ಗೀತಾಪ್ರಸನ್ನ ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published.

Back to top button