ಮೈಸೂರು: ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಹುಳಭರಿತ ಆಹಾರ ಸರಬರಾಜಾಗುತ್ತಿದ್ದು, ತಿನ್ನಲಾಗದೇ ಮಕ್ಕಳು ಅನ್ನ ಬಿಸಾಕುವಂತಹ ಪರಿಸ್ಥಿತಿ ಎದುರಾಗಿದೆ.
ಹೌದು. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿದ್ಯಾಂತಹ ಸುಮಾರು 304 ಶಾಲೆಯ ವಿದ್ಯಾರ್ಥಿಗಳು ಈ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ಶಾಲೆಗಳಿಗೆ ಉತ್ತಮವಾದ ಆಹಾರ ಪದಾರ್ಥಗಳ ಪೂರೈಕೆ ಆಗುತ್ತಿಲ್ಲ. ಕಳೆದು ಎರಡು ತಿಂಗಳಿಂದ ಶಾಲೆಗಳಿಗೆ ಪೂರೈಕೆಯಾಗಿರುವ ತೊಗರಿಬೇಳೆ ಹಾಗೂ ಅಕ್ಕಿಯಲ್ಲಿ ಓಟ್ಟೆಹುಳುಗಳು ತುಂಬಿವೆ. ಬಿಸಿಯೂಟದ ಸಿಬ್ಬಂದಿ ಇವುಗಳನ್ನು ಎಷ್ಟೇ ಶುಚಿ ಮಾಡಿದ್ರೂ ತೆಗೆಯಲು ಸಾಧ್ಯವಾಗುತ್ತಿಲ್ಲ. ಯಾವುದೇ ಪೋಷಕಾಂಶ ಸಿಗದ ಈ ಆಹಾರವನ್ನು ಮಕ್ಕಳು ತಿನ್ನಲು ಸಾಧ್ಯವಾಗದೇ ಬಿಸಾಕುತ್ತಿದ್ದಾರೆ.
Advertisement
Advertisement
ಈ ವಿಚಾರವನ್ನು ಅಕ್ಷರ ದಾಸೋಹದ ಅಧಿಕಾರಿಗಳ ಗಮನಕ್ಕೆ ತಲಾಗಿದೆ. ಆದ್ರೆ ಅವರು, ಆಹಾರ ಇಲಾಖೆಯಿಂದ ಪೂರೈಕೆಯಾಗುತ್ತಿರುವ ಆಹಾರವೇ ಇದಾಗಿದ್ದು ನಾವೇನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹಾರಿಕೆಯ ಉತ್ತರ ನೀಡುತ್ತಾರೆ. ಇತ್ತ ಸಿಬ್ಬಂದಿ ಬೇರೆ ದಾರಿಯಿಲ್ಲ ಎಂಬಂತೆ ಇದೇ ಆಹಾರವನ್ನು ಮಧ್ಯಾಹ್ನ ಅಡುಗೆ ಮಾಡಿ ಮಕ್ಕಳಿಗೆ ನೀಡುವಂತೆ ಆಗಿದೆ. ಹಸಿದು ಬಂದ ಬಡ ಮಕ್ಕಳು ಕೂಡ ತಟ್ಟೆಯಲ್ಲಿ ಹುಳ ಕಂಡರೂ ಕಣ್ಮುಚ್ಚಿಕೊಂಡು ತಿನ್ನುತ್ತಿರುವುದು ವಿಷಾದದ ಸಂಗತಿಯಾಗಿದೆ.
Advertisement
ಒಟ್ಟಿನಲ್ಲಿ ಬಿಸಿಯೂಟ ತಯಾರಿಕೆಗೆ ಶಾಲೆಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆಯಾಗುತ್ತಿದ್ದು ಮಕ್ಕಳ ಪ್ರಾಣದ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv