ಮೈಸೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿರುವವರಿಗೆ ನೀಡಲಾಗುವ ಪ್ರತಿಷ್ಠಿತ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಒಂದು ಕನ್ನಡ ಪತ್ರಿಕೆಯನ್ನು ಹುಟ್ಟು ಹಾಕಿ ಬೆಳೆಸಿದವರಿಗೆ ನೀಡಲಾಗುವ ವಿಶೇಷ ಗೌರವದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
2017ನೇ ಸಾಲಿನ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆಯ ನಿವೃತ್ತ ಸಂಪಾದಕ ಧೃವರಾಜ್ ವೆಂಕಟರಾವ್ ಮುತಾಲಿಕ್ ದೇಸಾಯಿ ಲಭಿಸಿತ್ತು. 2018 ನೇ ಸಾಲಿನಲ್ಲಿ ಮೈಸೂರಿನ ಕನ್ನಡಿಗರ ಪ್ರಜಾ ನುಡಿ ಪತ್ರಿಕೆಯ ಸಂಪಾದಕ ಡಿ.ಮಹಾದೇವಪ್ಪ ಅವರಿಗೆ ಲಭಿಸಿತ್ತು.
Advertisement
Advertisement
Advertisement
2017 ನೇ ಸಾಲಿನ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ತುಮಕೂರು ಪ್ರಾದೇಶಿಕ ಪತ್ರಿಕೆಯ ಸಂಪಾದಕ ಎಸ್.ನಾಗಣ್ಣ ಹಾಗೂ 2018 ನೇ ಸಾಲಿನ ಇದೇ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ ಯು.ಪಿ. ಶಿವಾನಂದ ಅವರು ಭಾಜನರಾಗಿದ್ದಾರೆ. ಜನವರಿ ಮೊದಲನೇ ವಾರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.