ಬೆಂಗಳೂರು: ದಸರಾ ದಿನವೇ ಮೈಸೂರು ಒಡೆಯರ್ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಸಿದ್ದು, ದಿ.ಶ್ರೀಕಂಠದತ್ತ ಒಡೆಯರ್ ಸಹೋದರಿ ವಿಶಾಲಾಕ್ಷಿ ಅವರು ವಿಧಿವಶರಾಗಿದ್ದಾರೆ.
ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಶಾಲಾಕ್ಷಿ (58) ಅವರು ಇಂದು ಸಂಜೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ವಿಶಾಲಾಕ್ಷಿ ಅವರು ಬಳಲುತ್ತಿದ್ದರು ಎನ್ನಲಾಗಿದ್ದು, ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಲಭಿಸಿದೆ.
Advertisement
Advertisement
ಕಳೆದ ಎರಡು ದಿನಗಳ ಹಿಂದೆಯೇ ವಿಶಾಲಾಕ್ಷಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತೀವ್ರ ನೀಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
Advertisement
ಇಂದು ಬೆಳಗ್ಗೆಯಷ್ಟೇ ಸಮಸ್ತ ನಾಡಿನ ಜನತೆಯೂ ಜಂಬೂಸವಾರಿಗೆ ಕಾತುರದಿಂದ ಕಾಯುತ್ತಿದ ವೇಳೆ ಪ್ರಮೋದಾ ದೇವಿ ಅವರ ತಾಯಿ ವಿಧಿವಶರಾಗಿದ್ದರು. ರಾಜವಂಶಸ್ಥೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
Advertisement
ವಿಜಯದಶಮಿ ದಿನವಾದ ಶುಕ್ರವಾರ ಬೆಳಗ್ಗೆ ಪುಟ್ಟಚಿನ್ನಮ್ಮಣಿ ಅವರ ಸಾವು ಮೈಸೂರು ರಾಜ ವಂಶಸ್ಥರ ಕುಟುಂಬಸ್ಥರನ್ನು ದುಃಖ ಸಾಗರದಲ್ಲಿ ಮುಳುಗಿಸಿತ್ತು. ಈಗ ಸಂಜೆ ವಿಶಾಲಾಕ್ಷಿ ಅವರು ವಿಧಿವಶರಾಗಿದ್ದಾರೆ. ಇದನ್ನು ಓದಿ: ರಾಜಮಾತೆಗೆ ಮಾತೃವಿಯೋಗ- ಇದು ಯಾವುದರ ಸಂಕೇತ…? ಶ್ರೀ ರೇಣುಕಾರಾಧ್ಯ ಗುರೂಜಿ ಸ್ಪಷ್ಟನೆ
ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿ ದೇವಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ.
ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ದೇವಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— CM of Karnataka (@CMofKarnataka) October 19, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv