ಚಂದನ್ ಶೆಟ್ಟಿಗೆ ಬ್ಯಾನ್ ವಾರ್ನಿಂಗ್ ಕೊಟ್ಟ ಎಸ್ಪಿ

Public TV
2 Min Read
mys chandan shetty sp warning

ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿದ ಪ್ರಕರಣದ ಬಗ್ಗೆ ಎಸ್‌ಪಿ ರಿಷ್ಯಂತ್ ಚಂದನ್ ಶೆಟ್ಟಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಎಸ್‌ಪಿ ಅವರು, ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ ಎಂದು ಚಂದನ್ ಶೆಟ್ಟಿಗೆ ಎಚ್ಚರಿಕೆ ನೀಡಿದ್ದೇವೆ. ಈ ಸಂಬಂಧ ಗಂಭೀರವಲ್ಲದ ಅಪರಾಧ(ಎನ್‌ಸಿ) ಕೂಡ ಮಾಡಲಾಗಿದೆ, ಅದು ಕೂಡ ವಿಚಾರಣೆ ನಡೆಯುತ್ತದೆ. ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ ಕ್ಷಣಕ್ಕೆ ಬಳಸಿಕೊಳ್ಳುವ ಎಲ್ಲಾ ಕಲಾವಿದರಿಗೂ ಈ ಎಚ್ಚರಿಕೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚಂದನ್- ನಿವೇದಿತಾ ಅದ್ಧೂರಿ ನಿಶ್ಚಿತಾರ್ಥ

chandan shetty 1

ಚಂದನ್ ಪ್ರಪೋಸ್ ಪ್ರಕರಣದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ವಿಚಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟಿದ್ದೇವೆ. ಅವರು ಎಲ್ಲವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಸ್‌ಪಿ ಸ್ಪಷ್ಟಪಡಿಸಿದರು.

ನಾನು ಯಾವುದೇ ಕೆಟ್ಟ ಉದ್ದೇಶದಿಂದ ಆ ರೀತಿ ಮಾಡಿಲ್ಲ. ವೇದಿಕೆಯಲ್ಲಿ ನಾನು ಮದುವೆ ಅಥವಾ ಎಂಗೆಜ್‌ಮೆಂಟ್ ಆಗಿಲ್ಲ. ವೇದಿಕೆ ಮೇಲೆ ಜನರ ಮುಂದೆ ನಿವೇದಿತಾ ಅವರ ಗಮನ ಸೆಳೆಯಲು ಪ್ರಪೋಸ್ ಮಾಡಿದೆ. ಅದರಲ್ಲಿ ಬೇರೆ ಉದ್ದೇಶ ಇರಲಿಲ್ಲ. ಜನರು ಕೂಡ ಆರ್ಕಷಿತರಾಗುತ್ತಾರೆ ಎಂದು ಈ ರೀತಿ ನಡೆದುಕೊಂಡೆ ಎಂದು ಚಂದನ್ ವಿವರಣೆ ನೀಡಿದ್ದಾರೆ. ಎಂದು ಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ:ಟೀಕಾಕಾರರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

chandan copy

ನಡೆದಿದ್ದೇನು?
ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾರಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು, ಅಲ್ಲದೇ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದ್ದರು. ಇದನ್ನೂ ಓದಿ:ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

CHANDAN CASE 4

ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಯಿತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದ್ದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದರು. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದರು.

Chandan Nivedita 2

ಆದರೆ ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಮೇಲೆ ದೂರು ದಾಖಲು ಮಾಡಿದ್ದರು. ಸರ್ಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಕುರಿತು ಚಂದನ್ ಮೇಲೆ ಕೇಸಾದರೆ, ನಿವೇದಿತಾರಿಂದ ಅತಿಕ್ರಮ ಪ್ರವೇಶ, ಸಂಚುರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲು ಮಾಡಲಾಗಿತ್ತು. ಇದನ್ನೂ ಓದಿ:ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

chandan shetty niveditha gowda

ಸರ್ಕಾರಿ ಕಾರ್ಯಕ್ರಮವನ್ನು ತಪ್ಪಾಗಿ ಬಳಸಿಕೊಂಡಿದ್ದಕ್ಕೆ ಚಂದನ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್ ಆಗ್ರಹಿಸಿದ್ದರು. ಮೈಸೂರು ಯೂತ್ ಕಾಂಗ್ರೆಸ್, ಕರ್ನಾಟಕ ಪ್ರಜಾಪಾರ್ಟಿ, ಸಾಮಾಜಿಕ ಹೋರಾಟಗಾರ ಗಂಗರಾಜುರಿಂದ ದೂರುಗಳು ದಾಖಲಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಮೇಲೆ ದೂರುಗಳ ಸಂಖ್ಯೆ ಹೆಚ್ಚಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *