ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಮೈಸೂರು ಪೊಲೀಸರು 8ನೇ ಆರೋಪಿಯನ್ನು ಬಂಧಿಸಿದ್ದಾರೆ.
ಗೌಸಿಯಾ ನಗರದ ಮತೀನ್ ಬೇಗ್(45) ಬಂಧಿತ ಆರೋಪಿ. ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗೆ ಸಹಕರಿಸಿದ್ದ ಆರೋಪದಲ್ಲಿ ಮತೀನ್ ಬೇಗ್‍ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: 3 ಬಾರಿ ತನ್ವೀರ್ ಸೇಠ್ ಕೊಲೆಗೆ ಯತ್ನಿಸಿದ್ದ ಆರೋಪಿ
ಶಾಸಕ ತನ್ವೀರ್ ಸೇಠ್ ಕೊಲೆಗೆ ಯತ್ನಿಸಿದ್ದ ಆರೋಪಿ ಫರಾನ್ ಪಾಷನನ್ನು ಘಟನೆ ನಡೆದ ಕ್ಷಣದಲ್ಲೆ ಸ್ಥಳೀಯರ ಸಹಕಾರದಿಂದ ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಯನ್ನು ವಿಚಾರಣೆ ನಡೆಸಿ ಆರೋಪಿಗೆ ಸಹಕರಿಸಿದ 6 ಮಂದಿಯನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾ ಪ್ರೇರಣೆ
ಇದೀಗ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 8ಕ್ಕೇರಿದೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ರಚಿಸಿರುವ ತನಿಖಾ ತಂಡದಿಂದ ಆರೋಪಿ ಬಂಧನವಾಗಿದ್ದು, ಪ್ರಕರಣದ ವಿಚಾರಣೆ ಬಿರುಸಾಗಿ ಸಾಗಿದ್ದು, ಇನ್ನೂ ಹಲವರ ಬಂಧನ ಸಾಧ್ಯತೆ ಹೆಚ್ಚಿದೆ.
ಏನಿದು ಪ್ರಕರಣ?
ನವೆಂಬರ್ 17ರ ರಾತ್ರಿ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್(24) ಚಾಕುವಿನಿಂದ ಹಲ್ಲೆ ಮಾಡಿದ್ದನು. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.