ಮೈಸೂರು: ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮಿರ ಪ್ಲೇಕಾರ್ಡ್ ಪ್ರದರ್ಶನ ವಿಚಾರವಾಗಿ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದ ನಂತರ ಮೈಸೂರು ಪೊಲೀಸರು ಎಚ್ಚೆತ್ತಿದ್ದಾರೆ. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಗೆ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ.
Advertisement
ಘಟನೆ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತಿದ್ದಾರೆ. ಪ್ಲೇಕಾರ್ಡ್ ಪ್ರದರ್ಶನ ವಿಚಾರವಾಗಿ ಪ್ರತಿಭಟನೆ ಆಯೋಜಕರ ಮೇಲೆ ಈ ದೂರು ದಾಖಲಾಗಿದೆ. ಯಾವ ಸಂಘಟನೆಯ ಪ್ರತಿಭಟನೆಗೆ ಕರೆ ಕೊಡಲಾಗಿತ್ತು ಆ ಸಂಘಟನೆಯ ಮುಖ್ಯಸ್ಥರು ಹಾಗೂ ಸದಸ್ಯರ ಮೇಲೆ ದೂರು ದಾಖಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ಭಾಗಿಯಾದವರ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ.
Advertisement
Advertisement
ಘಟನೆ ಸಂಪೂರ್ಣ ಮಾಹಿತಿ ಪಡೆದು ಪ್ಲೇಕಾರ್ಡ್ ಹಿಡಿದವರ ಗುರುತು ಪತ್ತೆಗೂ ಪೊಲೀಸರು ಮುಂದಾಗಿದ್ದಾರೆ. ಪ್ರತಿಭಟನೆಗೆ ಪೊಲೀಸ್ ಠಾಣೆಯಿಂದ ಆಯೋಜಕರು ಅನುಮತಿಯನ್ನೇ ಪಡೆದಿರಲಿಲ್ಲ. ಜಯಲಕ್ಷೀಪುರಂ ಠಾಣೆಯಲ್ಲಿ ನಿನ್ನೆಯ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಬಗ್ಗೆಯೂ ವಿವಿ ಕುಲಪತಿಗಳಿಂದ ಮಾಹಿತಿ ಪಡೆಯುತ್ತಿದ್ದೇವೆ. ಎಲ್ಲ ಮಾಹಿತಿ ಪಡೆದು ತನಿಖೆ ನಡೆಸುತ್ತೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ತಿಳಿಸಿದ್ದಾರೆ.