Crime
ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ದುರ್ಮರಣ

ಮೈಸೂರು: ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕು ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿ ಮಗುವನ್ನು ಒಂದೂವರೆ ವರ್ಷದ ದಯಾನಂದ ಎಂದು ಗುರುತಿಸಲಾಗಿದೆ. ಈತ ತೆಂಕಲಕೊಪ್ಪಲಿನ ನಟರಾಜ್ ಎಂಬವರ ಪುತ್ರ. ಪುಟ್ಟ ಕಂದಮ್ಮ ನಿರ್ಮಾಣ ಹಂತದಲ್ಲಿದ್ದ ಮನೆ ಮುಂದಿನ ಸಂಪಿಗೆ ಬಿದ್ದು ಮೃತಪಟ್ಟಿದೆ.
ದಯಾನಂದ ಮನೆ ಮುಂದೆ ತನ್ನ ಅಕ್ಕನೊಂದಿಗೆ ಆಟವಾಡುತ್ತಿದ್ದ. ಆದರೆ ಅಕ್ಕ ಮನೆ ಒಳಗೆ ಹೋಗಿ ಬರುವಷ್ಟರಲ್ಲಿ ಮಗು ನಾಪತ್ತೆಯಾಗಿದ್ದ. ಈ ವೇಳೆ ಹುಡುಕಾಡಿದಾಗ ಮಗುವಿನ ಮೃತದೇಹ ನೀರಿನ ಸಂಪಿನಲ್ಲಿ ಪತ್ತೆಯಾಗಿದೆ. ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.
ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
