– ಹುಲಿ ಕೊಂದಿದೆ ಅಂತ ನಂಬಿಸಲು ಹೋಗಿ ತಗ್ಲಾಕೊಂಡ ಹೈನಾತಿ
ಮೈಸೂರು: ಪರಿಹಾರ ಹಣದ (Compensation money) ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ವೆಂಕಟಸ್ವಾಮಿ ಕೊಲೆಯಾದ ವ್ಯಕ್ತಿ. ಈತನ ಪತ್ನಿ ಸಲ್ಲಾಪುರಿ ಪತಿಯನ್ನು ಕೊಲೆ ಮಾಡಿ ಹುಲಿ (Tiger) ಕೊಂದಿದೆ ಎಂದು ನಾಟಕವಾಡಿದ್ದ ಹೈನಾತಿ. ಇದನ್ನೂ ಓದಿ: ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ
ಈ ದಂಪತಿ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸ ಇದ್ದರು. ಒಂದು ವಾರದ ಹಿಂದೆ ಪತಿ ನಾಪತ್ತೆಯಾಗಿದ್ದಾರೆ ಅಂತ ಪತ್ನಿ ದೂರು ನೀಡಿದ್ದರು. ಹುಲಿ ಆತನನ್ನು ಕೊಂದು ಎಳೆದುಕೊಂಡು ಹೋಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಳು. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಪ್ರಾಣಿ ಬಂದ ಕುರುಹು ಇರಲಿಲ್ಲ. ಅನುಮಾನಗೊಂಡು ಮನೆಯಲ್ಲಿ ಹುಡುಕಾಟ ವೇಳೆ ಮನೆಯ ಹಿಂದೆ ತಿಪ್ಪೆಗುಂಡಿಯಲ್ಲಿ ವೆಂಕಟಸ್ವಾಮಿ ಶವ ಪತ್ತೆಯಾಗಿದೆ.
ವಿಷ ಹಾಕಿ ಪತಿ ಕೊಲೆ ಮಾಡಿದ್ದ ಪತ್ನಿ ನಂತರ ತಿಪ್ಪೆಗುಂಡಿಗೆ ಎಳೆದುಕೊಂಡು ಹಾಕಿ ಕಥೆ ಕಟ್ಟಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಪರಿಹಾರದ ಹಣಕ್ಕಾಗಿ ಕೃತ್ಯವೆಸಗಿರುವ ಬಗ್ಗೆ ಹೇಳಿಕೆ ನೀಡಿದ್ದಾಳೆ. ಕಾಡು ಪ್ರಾಣಿಯಿಂದ ಹತ್ಯೆಗೊಳಗಾದ ಕುಟುಂಬಕ್ಕೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಅಂತಾ ಕೊಲೆ ಮಾಡಿದ್ದಾಳೆ. ಪತ್ನಿ ಸಲ್ಲಾಪುರಿಯನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ