ಕುಡಿದ ಮತ್ತಿನಲ್ಲಿ ಬೈಕ್‍ಗಳ ಮೇಲೆಯೇ ಕಾರು ಹತ್ತಿಸಿದ

Public TV
0 Min Read
MYS

ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಯುವಕರು ಮಧ್ಯರಾತ್ರಿ ಪೆಟ್ರೋಲ್ ಬಂಕ್‍ನಲ್ಲಿ ಗಲಾಟೆ ಮಾಡಿಕೊಂಡ ಘಟನೆ ಮೈಸೂರಲ್ಲಿ ನಡೆದಿದೆ.

ಮೈಸೂರಿನ ಮೆಟ್ರೋಪೋಲ್ ಬಳಿಯ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿ ಪೆಟ್ರೋಲ್ ಗಾಗಿ ವಾಹನ ಸವಾರರು ಮಧ್ಯರಾತ್ರಿ ಮುಗಿಬಿದ್ದಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಕಾರು ಚಲಾಯಿಸಿಕೊಂಡು ಬಂದು ಬೈಕ್ ಗಳ ಮೇಲೆ ನುಗ್ಗಿಸಿದ್ದಾನೆ.

MYS 1

ಇದರಿಂದ ಎರಡು ದ್ವಿಚಕ್ರ ವಾಹನಗಳು ಜಖಂ ಆಗಿವೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *