ಚಿತ್ರದುರ್ಗ: ಮೈಸೂರಿನ ಯುವರಾಜ ಯದುವೀರ್ ಭಾನುವಾರ ರಜೆ ಇದ್ದ ಪ್ರಯುಕ್ತ ಕಲ್ಲಿನ ಕೋಟೆ ಚಿತ್ರದುರ್ಗಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.
ಯುವರಾಜ ಯದುವೀರ್ ಕೋಟೆ ವೀಕ್ಷಣೆ ಮಾಡಿ ಕೋಟೆಯ ಬಗ್ಗೆ ವಿವರಣೆ ಪಡೆದಿದ್ದಾರೆ. ಈ ವೇಳೆ ಮೈಸೂರಿನ ಯುವರಾಜ ನನ್ನು ನೋಡಿದ ಕೋಟೆನಾಡಿನ ಜನರು ಪುಳಕಿತರಾಗಿದ್ದು, ಅವರನ್ನು ನೋಡಲು ಪ್ರವಾಸಿಗರು ಮುಗಿಬಿದ್ದಿದ್ದರು.
Advertisement
ಕೋಟೆ ವೀಕ್ಷಣೆ ಬಳಿಕ ಮಾತನಾಡಿದ ಯದುವೀರ್, ಇದೇ ಮೊದಲ ಬಾರಿಗೆ ನಾನು ಕೋಟೆಗೆ ಭೇಟಿ ನೀಡಿದ್ದೇನೆ. ಐತಿಹಾಸಿಕ ಕೋಟೆ ನೋಡಿ ತುಂಬಾ ಸಂತೋಷವಾಗಿದೆ. ರಾಜ್ಯದ ರಾಜ ಮನೆತನಗಳಿಗೆ ಅವಿನಾಭಾವ ಸಂಬಂಧವಿದೆ. ನನ್ನ ಅಜ್ಜಿ ಗಾಯಿತ್ರಿದೇವಿ ಅವರ ಹೆಸರಿನಲ್ಲಿ ವಾಣಿ ವಿಲಾಸ ಜಲಾಶಯಗಳಿವೆ ಎಂದು ತಮ್ಮ ಸಂತಸವನ್ನು ವ್ಯಕ್ತ ಪಡಿಸಿದ್ದಾರೆ.
Advertisement
Advertisement
ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜಮಾತೆ ಪ್ರಮೋದಾದೇವಿ ಮಾತನಾಡಿದ್ದ ಬಗ್ಗೆ ತಿಳಿಸಿದ್ದಾರೆ. ರಾಜಕೀಯಕ್ಕೆ ಬರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅಮಿತ್ ಶಾ ಅವರು ರಾಜಮಾತೆ ಪ್ರಮೋದಾದೇವಿ ಮತ್ತು ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜ್ಯ ಸಭೆಗೆ ಆಯ್ಕೆ ಮಾಡುವ ಬಗ್ಗೆ ಯಾವುದೇ ರೀತಿಯ ಆಫರ್ ನೀಡಿಲ್ಲ ಎಂದು ಹೇಳಿದ್ದಾರೆ. ಇದನ್ನು ಓದಿ: ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ
Advertisement
ಜನರು ಬಯಸಿದರೆ ಮುಂದೆ ರಾಜಕೀಯಕ್ಕೆ ಬರುತ್ತೇನೆ. ಸದ್ಯಕ್ಕೆ ರಾಜಕೀಯ ನನ್ನ ದಾರಿಯಲ್ಲಿ ಇಲ್ಲ. ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂಪರ್ಕಿಸುವ ಕಾರಿಡಾರ್ ಮಾಡುವ ಚಿಂತನೆ ಇದೆ. ಆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದು. ಪ್ರವಾಸಿಗರೂ ಕೂಡ ಇಂತಹ ಐತಿಹಾಸಿಕ ಸ್ಥಳಗಳ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಮಾರ್ಚ್ 30 ಶುಕ್ರವಾರದಂದು ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಅವರ ಚರ್ಚೆ ನಡೆಸಿದ್ದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ ಹಾಗೂ ಪ್ರಮೋದಾ ದೇವಿ ಒಡೆಯರ್ ಅವರು ಗೌಪ್ಯ ಮಾತುಕತೆ ನಡೆಸಿದ್ದರು. ಈ ವೇಳೆ ಯದುವೀರ್ ಒಡೆಯರ್ ಅವರನ್ನು ಬಿಟ್ಟು ಇಬ್ಬರೇ ಮಾತುಕತೆ ನಡೆಸಿದ್ದರು.